ಕಳೆದ ವಾರ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್‌ಪಿ ಬಾಲಸುಬ್ರಮಣಿಯಮ್ ಆರೋಗ್ಯ ಚೇತರಿಕೆ ಕಂಡಿಲ್ಲ. ಬದಲಾಗಿ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಡುತ್ತಿದೆ.
ಆಗಸ್ಟ್ 5 ರಿಂದ ಎಂಜಿಎಂ ಹೆಲ್ತ್ ಕೇರ್ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್‌ಪಿಬಿ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ದಿನೇ ದಿನೇ ಆರೋಗ್ಯ ಸ್ಥಿತಿ ಹದಗೆಡುತ್ತಿರುವುದರಿಂದ ಅವರನ್ನು ನಿಗಾವಣೆಯಲ್ಲಿಡಲಾಗಿದೆ. ತಜ್ಞ ವೈದ್ಯರ ತಂಡದ ಸಲಹೆ ಮೇರೆಗೆ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ತನ್ನ ಹೇಳಿಕೆ ನೀಡಿದೆ.
