ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೆದೆಡೆಗೆ ಗುಂಡು ಹಾರಿಸಿದೆ ಎಂದು ಭಾರತೀಯ ಸೇನೆ ಹೇಳಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ 2027 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆಯೆಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಜೂನ್ 16 ರ ರಾತ್ರಿ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ನೌಗಾಮ್ ಪ್ರದೇಶದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆಂದು ಭಾರತೀಯ ಸೇನೆ ವಕ್ತಾರ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಭಾರತೀಯ ಸೇನೆಯು ಬಲವಾಗಿ ಪ್ರತ್ಯುತ್ತರ ನೀಡಿದೆಯೆಂದು ಅವರು ಹೇಳಿದ್ದಾರೆ.
ಯಾವುದೇ ಸಾವು-ನೋವು ಸಂಭವಿಸಿಲ್ಲವೆಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನ ಸೇನೆಯು ಹಲವು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ನೆಲೆಗಳೆಡೆಗೆ ಗುಂಡಿನ ದಾಳಿ ನಡೆಸಿದೆ. ಕಳೆದ ಹತ್ತು ವರ್ಷಗಳಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ 2027 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆಯೆಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಲಢಾಖ್‌ನಲ್ಲಿ ಇಂಡೋ-ಚೀನಿ ಸೈನಿಕರ ಹಿಂಸಾತ್ಮಕ ಮುಖಾಮುಖಿಯಾದ ಮರುದಿನವೇ ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿದೆ. ಚೀನೀ ಸೈನಿಕರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಚೀನಾ ಅಧಿಕೃತವಾಗಿ ಘೋಷಿಸದಿದ್ದರೂ 43 ಚೀನಾ ಯೋಧರು ಮೃತಪಟ್ಟಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.