ನವೆಂಬರ್ 3 ರಂದು ನಡೆಯುವ ಗುಜರಾತ್ ವಿಧಾನಸಭಾ ಉಪಚುನಾವಣೆಯ ಸ್ಪರ್ಧೆಯಲ್ಲಿರುವ 80 ಅಭ್ಯರ್ಥಿಗಳ ಪೈಕಿ 18 % ದಷ್ಟು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿ ತಿಳಿಸಿದೆ.
ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 81 ಅಭ್ಯರ್ಥಿಗಳಲ್ಲಿ 80 ಮಂದಿ ನೀಡಿರುವ ಅಫಿಡವಿಟ್‌ಗಳ ವಿಶ್ಲೇಷಣೆಯನ್ನು ಆಧರಿಸಿ ಈ ವರದಿಯನ್ನು ನೀಡಲಾಗಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
7 ರಿಂದ 9 ಅಭ್ಯರ್ಥಿಗಳು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದರೆ, 14 ರಿಂ 18 ಶೇಕಡಾ ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿ ತಿಳಿಸಿದೆ.
ಅಭ್ಯರ್ಥಿಗಳು ಘೋಷಿಸಿರುವ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಐದು ವರ್ಷಗಳ ಜೈಲು ಶಿಕ್ಷೆ ನೀಡಬಹುದಾದ ಜಾಮೀನು ರಹಿತ ಅಪರಾಧಗಳಾಗಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.
ವರದಿಯ ಪ್ರಕಾರ, ಬಿಟಿಪಿ ಪಕ್ಷದ ಪ್ರತಿ ಇಬ್ಬರು ಅಭ್ಯರ್ಥಿಗಳಲ್ಲಿ ಒಬ್ಬರು, ಬಿಜೆಪಿಯ ಪ್ರತಿ ಎಂಟು ಅಭ್ಯರ್ಥಿಗಳಲ್ಲಿ ಮೂವರು, ಕಾಂಗ್ರೆಸ್ ಪಕ್ಷದ ಪ್ರತಿ ಎಂಟು ಅಭ್ಯರ್ಥಿಗಳಲ್ಲಿ ಇಬ್ಬರು ಹಾಗೂ 53 ಸ್ವತಂತ್ರ ಅಭ್ಯರ್ಥಿಗಳಲ್ಲಿ ಎಂಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇರುವುದಾಗಿ ಅಫಿಡವಿಟ್‌ನಲ್ಲಿ ಘೋಷಿದ್ದಾರೆ.
ಎಂಟು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರ ರೆಡ್ ಅಲರ್ಟ್ ಕ್ಷೇತ್ರಗಳಾಗಿವೆ, ಅಲ್ಲಿ ಮೂರು ಅಥವಾ ಹೆಚ್ಚಿನ ಸ್ಪರ್ಧಾಳುಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.
ಕ್ರಿಮಿನಲ್ ಪ್ರಕರಣಗಳ ಸುಮಾರು 18 ಪ್ರತಿಶತದಷ್ಟು ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ತಮ್ಮ ಹಳೆಯ ಅಭ್ಯಾಸವನ್ನು ಮತ್ತೆ ಪಕ್ಷಗಳು ಮತ್ತೆ ಅನುಸರಿಸಿದೆ. ಹಾಗಾಗಿ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳು ರಾಜಕೀಯ ಪಕ್ಷಗಳ ಮೇಲೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎನ್ನುವುದನ್ನು ಈ ವರದಿ ತಿಳಿಸಿದೆ.
“ಗುಜರಾತ್ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಪ್ರಮುಖ ಪಕ್ಷಗಳು ಅಭ್ಯರ್ಥಿಗಳಲ್ಲಿ25 ರಿಂದ 38 ಶೇಕಡಾ ಅಭ್ಯರ್ಥಿಗಳು ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಕ್ರಿಮಿನಲ್ ಹಿನ್ನೆಲೆ ಹೊಂದಿರದ ಅಭ್ಯರ್ಥಿಗಳನ್ನು ಅಥವಾ ಕ್ರಿಮಿನಲ್ ಆರೋಪಗಳಿಲ್ಲದ ಇತರ ವ್ಯಕ್ತಿಗಳನ್ನು ಏಕೆ ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಫೆಬ್ರವರಿಯಲ್ಲಿ ರಾಜಕೀಯ ಪಕ್ಷಗಳನ್ನು ಕೇಳಿಕೊಂಡಿತ್ತು. ಅದಾಗ್ಯೂ ರಾಜಕೀಯ ಪಕ್ಷಗಳು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗಳಿಗೆ ಮಣೆ ಹಾಕಿದೆ.
ಕಾಂಗ್ರೆಸ್ ಶಾಸಕರ ರಾಜೀನಾಮೆ ನೀಡಿದ ನಂತರ ಗುಜರಾತ್‌ನ ಅಬ್ದಾಸಾ, ಲಿಂಬಿ, ಮೊರ್ಬಿ, ಧಾರಿ, ಗಡಾಡಾ, ಕಾರ್ಜನ್, ಡ್ಯಾಂಗ್ ಮತ್ತು ಕಪ್ರದ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಿದೆ.