ಬಹಳ ದಿನಗಳಿಂದು ಮುಂದೂಡಲ್ಪಡುತ್ತಿರುವ ಗ್ರಾಮ ಪಂಚಾಯತಿ ಚುನಾವಣೆಗಳನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಕೊನೆಗೂ ಅಸ್ತು ಎಂದಿದೆ. ಇನ್ನು ಮೂರು ವಾರಗಳ ಒಳಗಾಗಿ ವೇಳಾಪಟ್ಟಿ ಸಿದ್ದಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 23ಕ್ಕೆ ವಿಚಾರಣೆ ಅಂತಿಮಗೊಂಡಿದ್ದರೂ, ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಎ ಎಸ್ ಓಕಾ ಅವರಿದ್ದ ವಿಭಾಗೀಯ ಪೀಠವು ಶುಕ್ರವಾರದಂದು ತೀರ್ಪನ್ನು ನೀಡಿದ್ದು, ಚುನಾವಣೆ ನಡೆಸುವಂತೆ ನಿರ್ದೇಶೀಸಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಒಟ್ಟು 5800 ಗ್ರಾಮ ಪಂಚಾಯತಿಗಳ ಅವಧಿಯು ಮುಗಿದಿದ್ದು, ಈ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕು ಹಾಗೂ ಇನ್ನು ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಬೇಕೆಂದು ನಿರ್ದೇಶನ ನೀಡಿದೆ. ಇನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಅವಶ್ಯಕತೆ ಇದ್ದರೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವಂತೆ ಕೋರ್ಟ್ ಹೇಳಿದ್ದು, ಇದರಲ್ಲಿ ಸರ್ಕಾರದ ಪಾತ್ರವೇನಿಲ್ಲ ಎಂದು ಹೇಳಿದೆ.
Also Read: ಪಂಚಾಯ್ತಿಗೆ ಆಡಳಿತ ಮಂಡಳಿ: ಸರ್ಕಾರದ ನಡೆಯ ಹಿಂದಿನ ಹಕೀಕತ್ತು ಏನು?
ಇನ್ನು ಕೋವಿಡ್ ನೆಪವಿಟ್ಟುಕೊಂಡು ರಾಜ್ಯ ಸರ್ಕಾರವು ಗ್ರಾಮ ಪಂಚಾಯತಿ ಚುನಾವಣೆಗಳನ್ನು ಇದೇ ವರ್ಷ ಮೇ ತಿಂಗಳಲ್ಲಿ ಆರು ತಿಂಗಳ ಕಾಲ ಮುಂದೂಡಿತ್ತು. ಹಾಲಿ ಇರುವ ಆಡಳಿತಾವಧಿಯನ್ನು ಆರು ತಿಂಗಳುಗಳ ಕಾಲ ಮುಂದುವರಿಸುವ ಬದಲು, ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ಅಥವಾ ಆಡಳಿತ ಮಂಡಳಿಯನ್ನು ನೇಮಕಗೊಳಿಸುವ ನಿರ್ಧಾರವನ್ನು ತಾಳಿತ್ತು. ಈ ನಿರ್ಧಾರದ ವಿರುದ್ದ ವಿರೋಧ ಪಕ್ಷಗಳು ತೀವ್ರ ಅಸಮಾಧಾನವನ್ನು ಕೂಡಾ ವ್ಯಕ್ತಪಡಿಸಿದ್ದವು.
Also Read: ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ; ಆಯೋಗದ ನಿರ್ಧಾರ ಪ್ರಶ್ನಿಸಲು ಕಾಂಗ್ರೆಸ್ ನಿರ್ಧಾರ