ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಬೇಡಿ ಎಂದು ಚುನಾವಣಾ ಆಯೋಗ ಹೇಳಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಆದರೆ ಕೆಲವು ಟಿ.ವಿ ವಾಹಿನಿಗಳಲ್ಲಿ ಈ ಚುನಾವಣೆಯ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಲಾಗುತ್ತಿದೆ. ಇದರಿಂದ, ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಿದಂತಾಗುತ್ತದೆ ಎಂದು ಹೇಳಿದೆ.
ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷರಹಿತ ಚುನಾವಣೆಗಳಾಗಿರುವುದರಿಂದ ಮಾಧ್ಯಮಗಳು ಆಧಾರವಿಲ್ಲದೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬಾರದೆಂದು ಚುನಾವಣಾ ಆಯೋಗ ಹೇಳಿದೆ.