ಇಂದು ಎರಡನೇ ಆಷಾಢ ಶುಕ್ರವಾರ.ಮೈಸೂರಿನ (Mysuru) ಚಾಮುಂಡಿ ಬೆಟ್ಟದಲ್ಲಿ (Chamundi hill) ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದು ಬೆಳಗಿನ ಜಾವದಿಂದಲೇ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿದೆ.

ಈ ಮಧ್ಯೆ ಇಂದು ನಟ ದರ್ಶನ್ (Actor Darshan) ಕೂಡ ಪತ್ನಿ ವಿಜಯಲಕ್ಷ್ಮಿ (Vijayalakshmi darshan) ಹಾಗೂ ಸಹೋದರ ದಿನಕರ್ (Dinakar)ಜೊತೆ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ.

ಇಂದು ಬೆಳಿಗ್ಗೆ 6ಗಂಟೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆಯುತ್ತಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇದ ಹೇರಿ ಲಲಿತ ಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಳೆದ ವರ್ಷದ ಅಷಾಢ ಮಾಸದಂದು ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಯಲ್ಲಿದ್ರು. ಹೀಗಾಗಿ ಬೆಟ್ಟಕ್ಕೆ ಬರಲು ಸಾಧ್ಯವಾಗಿರಲಿಲ್ಲ.ಆದ್ರೆ ಪ್ರತಿ ವರ್ಷವೂ ಕೂಡ ಅಷಾಢದಲ್ಲಿ ದರ್ಶನ್ ಚಾಮುಂಡೇಶ್ವರಿ ತಾಯಿ ದರ್ಶನ ಪಡೀತಾರೆ. ಹೀಗಾಗಿ ಇವತ್ತು ಪತ್ನಿ ವಿಜಯಲಕ್ಷ್ಮೀ, ಸಹೋದರನ ಜೊತೆ ದೇವಿಯ ದರ್ಶನ ಪಡೆದ್ರು.