• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ – ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !

ಪ್ರತಿಧ್ವನಿ by ಪ್ರತಿಧ್ವನಿ
March 9, 2024
in Top Story, ರಾಜಕೀಯ
0
ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ – ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !
Share on WhatsAppShare on FacebookShare on Telegram

ದೇಶದಾದ್ಯಂತ ಎಲ್ಲ ರಾಜಕೀಯ ಪಕ್ಷಗಳು ಮುಂಬರಲಿರುವ ಲೋಕಸಮರವನ್ನ ಸಮರ್ಥವಾಗಿ ಎದುರಿಸಲು ತಯಾರಿ ಆರಂಭಿಸಿದೆ . ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿ ಅಭ್ಯರ್ಥಿಗಳು ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿವೆ.ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳು ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ ಎರಡನೇ ಪಟ್ಟಿ ಅಂತಿಮಗೊಳಿಸುವಂತಹ ಕಸರತ್ತಿನಲ್ಲಿ ತೊಡಗಿಸಿಕೊಂಡಿರುವ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಬಹುದಾದ ದೊಡ್ಡ ಬೆಳವಣಿಗೆ ನಡೆದು ಹೋಗಿದೆ.

ADVERTISEMENT

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡೋದಕ್ಕೆ ಕೇವಲ ಇನ್ನೂ ಒಂದೇ ವಾರ ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಅರುಣ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಚುನಾವಣೆ ಸಮೀಪದಲ್ಲಿರುವಾಗ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಅರುಣ್ ಗೋಯಲ್ ರವರ ಅಧಿಕಾರ ಅವಧಿ 2027ರವರೆಗೆ ಇತ್ತು . ಆದರೆ ಅವಧಿಗೂ ಮುನ್ನ ತಮ್ಮ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಹಲವು ರೀತಿಯ ರಾಜಕೀಯ ಆಯಾಮದ ಚರ್ಚೆಗೆ ದಾರಿ ಮಾಡಿಕೊಟ್ಟಿದೆ . ಗೋಯಲ್ ತಮ್ಮ ರಾಜೀನಾಮೆಯಲ್ಲಿ ಯಾವ ಕಾರಣಕ್ಕೆ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಎಂಬ ಕಾರಣವನ್ನೂ ನಮೂದಿಸಿಲ್ಲ.

ಈ ಬೆಳವಣಿಗೆ, ರಾಜೀನಾಮೆಯ ಹಿಂದೆ ರಾಜಕೀಯ ಒತ್ತಡ ಇದೆಯಾ,ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರಲಾಗ್ತಿದ್ಯಾ, ಯಾವ ಕಾರಣಕ್ಕಾಗಿ ತಮ್ಮ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದಾರೆ ಅನ್ನೋ ವಿಚಾರ ವ್ಯಾಪಕವಾಗಿ ದೇಶದಾದ್ಯಂತ ಚರ್ಚಿಸಲ್ಪಡುತ್ತಿದೆ.

ಇದು ವಿಪಕ್ಷಗಳಿಗೆ ಚುನಾವಣಾ ಅಸ್ತ್ರವಾದ್ರೂ ಆಶ್ಚರ್ಯ ಪಡಬೇಕಿಲ್ಲ . ಈಗಾಗಲೇ ಸಾಕಷ್ಟು ವಿಚಾರಗಳನ್ನ ಮುಂದಿಟ್ಟುಕೊಂಡು ಇಂಡಿಯಾ ಮೈತ್ರಿಕೂಟ ಮತ್ತು ಇತರೆ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಎನ್.ಡಿ.ಎ ಕೂಟವನ್ನ ಹಣೆಯಬೇಕು ಅಂತ ತಂತ್ರಗಾರಿಕೆ ರೂಪಿಸುತ್ತಿರುವ ಸಂದರ್ಭದಲ್ಲಿ ಈ ಬೆಳವಣಿಗೆ ಮಹತ್ವವನ್ನು ಪಡೆದುಕೊಂಡಿದೆ.

ವಿರೋಧ ಪಕ್ಷಗಳು ಈ ವಿಚಾರವನ್ನು ಪ್ರಮುಖವಾಗಿಸಿಕೊಂಡು ಈಬಾರಿಯ ಚುನಾವಣೆಗೆ ಜನರ ಮುಂದೆ ಹೋದರೆ, ಕೇಂದ್ರ ಸರ್ಕಾರದ ಕೌಂಟರ್ ಏನಾಗಿರಲಿದೆ ಎಂಬುದೇ ಕೋತೂಹಲಕ್ಕೆ ಕಾರಣವಾಗಿದೆ.

Tags: BJPCongress PartyElection CommissionParliamentನರೇಂದ್ರ ಮೋದಿ
Previous Post

ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ

Next Post

ಮತ್ತೆ ಒಂದಾದ ಡಿಎಂಕೆ & ಕಾಂಗ್ರೆಸ್ – ಕಲಮಕ್ಕೆ ಕಂಟಕ ? 

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಮತ್ತೆ ಒಂದಾದ ಡಿಎಂಕೆ & ಕಾಂಗ್ರೆಸ್ – ಕಲಮಕ್ಕೆ ಕಂಟಕ ? 

ಮತ್ತೆ ಒಂದಾದ ಡಿಎಂಕೆ & ಕಾಂಗ್ರೆಸ್ - ಕಲಮಕ್ಕೆ ಕಂಟಕ ? 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada