ಲಾಕ್‌ಡೌನ್ ಸಂದರ್ಭದಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಗಳು ತೆರೆಯುವ ಕಾಲ ಕೂಡಿ ಬಂದಿದೆ. ಶನಿವಾರದಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಜನವರಿ 1, 2021ರಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿತರಗತಿಗಳು ಆರಂಭವಾಗಲಿದೆ. ಇನ್ನು 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯಡಿಯಲ್ಲಿ ತರಗತಿಗಳು ಆರಂಭವಾಗಲಿವೆ.
2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.
— CM of Karnataka (@CMofKarnataka) December 19, 2020
ಈ ತರಗತಿಗಳು ಹದಿನೈದು ದಿನ ಮುಂದುವರೆಯಲಿದ್ದು ನಂತರದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಹಂತದ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಳೆದ ಬಾರಿ ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಹಲವು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾದ ಕಾರಣಕ್ಕೆ ತಾತ್ಕಾಲಿಕವಾಗಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರೊಂದಿಗೆ ಹಲವು ಪೋಷಕರು ಕೂಡಾ ಶಾಲೆ ಪುನರಾರಂಭ ಮಾಡಬಾರದು ಎಂಬ ಅಂಶವನ್ನು ಸರ್ಕಾರದ ಮುಂದಿಟ್ಟಿದ್ದರು.






