ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕರೋನಾ ಸೋಂಕು ದೃಢವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ನಿನ್ನೆ ಬೆಳಗಾವಿ ಮತ್ತು ಬಾಗಲಕೋಟೆಗೆ ತೆರಳಬೇಕಾಗಿದ್ದ ಡಿಕೆ ಶಿವಕುಮಾರ್ ಅವರು ತಮ್ಮ ಪ್ರವಾಸವನ್ನು ರದ್ದು ಮಾಡಿದ್ದರು. ಆರೋಗ್ಯದ ದೃಷ್ಠಿಯಿಂದ ಈ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಡಿ ಕೆ ಶಿವಕುಮಾರ್ ರವಿವಾರ ಹೇಳಿದ್ದರು.
ನಂತರ ಡಿಕೆಶಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆದೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ದಾಖಲಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಆಪ್ತಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರಿಗೆ ಕೋವಿಡ್ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಡಿಕೆ ಶಿವಕುಮಾರ್ಗೆ ಹಾರೈಸಿದ್ದಾರೆ.