ಉಪಚುನಾವಣೆಯ ತಯಾರಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಕುಮಾರ್ ಅವರ ನಿವಾಸದ ಮೇಲೆ ಸೋಮವಾರ ಬೆಳಗ್ಗೆ ಏಕಕಾಲದಲ್ಲಿ ಸಿಬಿಐ ತಂಡ ದಾಳಿ ನಡೆಸಿದೆ.
ರಾಮನಗರದ ದೊಡ್ಡಹಾಲಹಳ್ಳಿಯಲ್ಲಿರುವ ಡಿಕೆ ಶಿವಕುಮಾರ್ ಗೆ ಸೇರಿದ ಮನೆಯ ಮೇಲೆ ಕೂಡಾ ದಾಳಿ ನಡೆಸಲಾಗಿದೆ. ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಅವರಿಗೆ ಸೇರಿದ ಹದಿನೈದಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದರೂ ಆಗಿರುವ ಡಿಕೆ ಸುರೇಶ್ ಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ದಾಳಿ ನಡೆಸಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಡಿಕೆ ಸುರೇಶ್, ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ, ಡಿಕೆ ಶಿವಕುಮಾರ್ ಸೇರಿದ ಹದಿನೈದಕ್ಕೂ ಹೆಚ್ಚು ಸ್ಥಳಗಳಲ್ಲಿ 60 ರಷ್ಟು ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸೋಲಾರ್ ಪ್ಲಾಂಟೇಶನ್ ಹಗರಣವೇ ದಾಳಿಗೆ ಕಾರಣವೆಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲದೆ, ಡಿಕೆ ಶಿವಕುಮಾರ್ ಆಪ್ತರಾದ ಶಶಿಕುಮಾರ್, ಶಿವಣ್ಣ ಅವರ ನಿವಾಸದ ಮೇಲೂ ಸಿಬಿಐ ತನಿಖಾ ತಂಡ ದಾಳಿ ನಡೆಸಲಾಗಿದೆ.
ಈ ಹಿಂದೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಅಲ್ಲದೆ, ಬಂಧನಕ್ಕೆ ಒಳಗಾಗಿ ಜೈಲು ವಾಸವನ್ನು ಅನುಭವಿಸಿ, ಜಾಮೀನಿನ ಮೂಲಕ ಹೊರಬಂದಿದ್ದರು.