ಕರೋನಾ ಸಾಂಕ್ರಾಮಿಕ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ತಮಿಳುನಾಡು ಮತ್ತು ಮಹಾರಾಷ್ಟ್ರ ಸರ್ಕಾರ ಮತ್ತೆ ಲಾಕ್‌ಡೌನ್ ಮೊರೆ ಹೋಗಿದೆ. ಆಗಸ್ಟ್ 31ರವರೆಗೆ ಎರಡೂ ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರೆಯಲಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಇನ್ನಷ್ಟು ಸೇವೆಗಳು ಸಾರ್ವಜನಿಕರಿಗಾಗಿ ತೆರೆದುಕೊಳ್ಳಲಿವೆ. ಆದರೆ, ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಇರಲಿದೆ, ಎಂದು ತಮಿಳುನಾಡು ಮುಖ್ಯಮಂತ್ರಿ ಎ ಪಳನಿಸ್ವಾಮಿ ಹೇಳಿಕೆ ನೀಡಿದ್ದಾರೆ. ಇನ್ನು ಗ್ರೇಟರ್ ಚೆನ್ನೈ ಭಾಗದಲ್ಲಿ ಇರುವಂತಹ ಖಾಸಗಿ ಕಚೇರಿಗಳು, ಕೈಗಾರಿಕೆಗಳು ಮತ್ತು ರಫ್ತು ಮಾಡುವ ಘಟಕಗಳು ಶೇ. 75 ಕಾರ್ಮಿಕರನ್ನು ಬಳಸಿಕೊಂಡು ಕೆಲಸ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಇನ್ನು ಮಹಾರಾಷ್ಟ್ರವು ಲಾಕ್‌ಡೌನ್ ವಿಸ್ತರಿಸುವ ಕುರಿತು ಬುಧವಾರ ರಾತ್ರಿ ಆದೇಶ ಹೊರಡಿಸಿದ್ದು, ಈ ಬಾರಿಯ ಲಾಕ್‌ಡೌನ್‌ನಲ್ಲಿ ಮಾಲ್‌ಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಆಗಸ್ಟ್ 5ರ ನಂತರ ಸಿನಿಮಾ ಮಂದಿರ, ಫುಡ್ ಕೋರ್ಟ್‌ಗಳಿಲ್ಲದೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಮಾರ್ಕೆಟ್‌ಗಳನ್ನು ಬೆಳಿಗ್ಗೆ 9ರಿಂದ ಸಂಜೆ 7ರವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ತಂಡವಿಲ್ಲದೆ ಆಡಬಹುದಾದಂತಹ ಗಾಲ್ಫ್, ಟೆನ್ನಿಸ್, ಹೊರಾಂಗಣ ಬ್ಯಾಡ್ಮಿಂಟನ್ ಆಟಗಳನ್ನು ಆಡಬಹುದಾಗಿದೆ. ಸ್ವಿಮ್ಮಿಂಗ್ ಪೂಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿಲ್ಲ. ಇನ್ನು ಅಗತ್ಯ ಸೇವೆಗಳು ಹಿಂದಿನಂತೆಯೇ ಕಾರ್ಯ ನಿರ್ವಹಿಸಲಿವೆ ಎಂದು ಮಹಾರಾಷ್ಟ್ರ ಸರ್ಕಾರದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.