• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತಾವು ಹೋಗೊಲ್ಲ, ಹೋಗುವವರನ್ನು ಬಿಡೊಲ್ಲ; ಯೋಗಿ ಮಾಡೆಲ್!

by
October 1, 2020
in ದೇಶ
0
ತಾವು ಹೋಗೊಲ್ಲ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಹಾಥ್ರಸ್ ಎಂಬ ಊರಿನ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು. ಅತ್ಯಾಚಾರ ಮಾಡಿದ ಪಾತಕಿಗಳು ಯುವತಿಯ ನಾಲಗೆಯನ್ನು ಕತ್ತರಿಸಿದ್ದರು. ಮರಣಾಂತಿಕ ಹಲ್ಲೆ ಮಾಡಿದ್ದರು‌. ಘಟನೆ ನಡೆದ ಮೂರು ದಿನಗಳ ಬಳಿಕ ಯುವತಿ ಮೃತಪಟ್ಟಳು. ಇಷ್ಟೆಲ್ಲಾ ಆದರೂ ಮುಖ್ಯಮಂತ್ರಿ ‘ಸಂತ’ ಯೋಗಿ ಆದಿತ್ಯನಾಥ್ ಗೆ ಸಂಕಟವಾಗಲಿಲ್ಲ. ಅವರ ಸಂಪುಟ ಸಹೋದ್ಯೋಗಿಗಳ ಮನ ಕರಗಲಿಲ್ಲ. ಸಮಾಜ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದವರಿಗೂ ಕರುಳು ಚುಳ್ ಎನ್ನಲ್ಲಿಲ್ಲ. ಯಾರೊಬ್ಬರಿಗೂ ಕಡೆಯ ಪಕ್ಷ ಯುವತಿಯ ಪೋಷಕರಿಗೆ ಸಾಂತ್ವನ ಹೇಳಬೇಕಿನಿಸಲಿಲ್ಲ. ಕ್ಷಮೆ ಅಲ್ಲದಿದ್ದರೂ ವಿಷಾದ ವ್ಯಕ್ತಪಡಿಸಬೇಕೆನಿಸಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ಟ್ವೀಟ್ ಅನ್ನು ಮಾಡಲಿಲ್ಲ.

ADVERTISEMENT

ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಾಂತ್ವನ ಹೇಳಲು ಮುಂದಾದರು. ಅದಕ್ಕಾಗಿ ದೆಹಲಿಯಿಂದ ಉತ್ತರ ಪ್ರದೇಶದ ಹಾಥ್ರಸ್ ಕಡೆ ಹೊರಟರು. ಆದರೆ ಉತ್ತರ ಪ್ರದೇಶ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಮಾರ್ಗ ಮಧ್ಯೆಯೇ ತಡೆದರು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರತಿರೋಧ ತೋರಿದರೂ ಲೆಕ್ಕಿಸದ ಪೊಲೀಸರು ಇಬ್ಬರೂ ನಾಯಕರನ್ನು ದೈಹಿಕವಾಗಿ ತಡೆದು ಉದ್ಧಟತನ‌ ತೋರಿದರು. ಉತ್ತರ ಪ್ರದೇಶ ಪೊಲೀಸರು ಪಾತ್ರಧಾರಿಗಳು ಮಾತ್ರ. ಸೂತ್ರಧಾರಿ ಯೋಗಿ ಆದಿತ್ಯನಾಥ್ ಒಬ್ಬರೇ ಅಲ್ಲ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯೇ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದೇ ಉತ್ತರ ಪ್ರದೇಶದ ಪೊಲೀಸರು ಅಂದು ಮಧ್ಯರಾತ್ರಿ ಯುವತಿಯ ಶವ ಸಂಸ್ಕಾರ ಮಾಡುವಾಗಲು ಇದೇ ರೀತಿ ವರ್ತಿಸಿದ್ದರು. ನಡುರಾತ್ರಿಯಲ್ಲಿ ಕುಟುಂಬದವರನ್ನು ಕತ್ತಲಲ್ಲಿಟ್ಟು ಯುವತಿಯ ಅಂತ್ಯ ಸಂಸ್ಕಾರ ಮಾಡುತ್ತಿದ್ದುದನ್ನು ಪ್ರಶ್ನಿಸಿದ ‘ಇಂಡಿಯಾ ಟುಡೆ’ ವರದಿಗಾರ್ತಿ ತನುಶ್ರೀ ದತ್ತಾ (ಅವರೊಬ್ಬರೇ ಈ ಘಟನೆಯನ್ನು ವರದಿ ಮಾಡಿದ್ದು) ಪ್ರಶ್ನೆಗೆ ಕಕ್ಕಾಬಿಕ್ಕಿಯಾಗಿದ್ದ ಪೊಲೀಸರು ‘ನಮಗೇನು ಗೊತ್ತಿಲ್ಲ, ಜಿಲ್ಲಾಧಿಕಾರಿಗಳನ್ನು ಕೇಳಿ’ ಎಂದು ಹೇಳುತ್ತಿದ್ದರು. ಜಿಲ್ಲಾಧಿಕಾರಿಗಳಿಗೆ ಕೇಳಿದ್ದರೆ ‘ನಮಗೇನೂ ಗೊತ್ತಿಲ್ಲ, ಸರ್ಕಾರವನ್ನು ಕೇಳಿ’ ಎಂದು ಹೇಳುತ್ತಿದ್ದರೇನೋ! ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ತಡೆದ ಪೊಲೀಸರಿಗೂ ಏನೂ ಗೊತ್ತಿಲ್ಲ. ಅವರು ‘ಮೇಲಿನವರ’ ಆಜ್ಞೆಯ ಪರಿಪಾಲಕರಷ್ಟೇ.

Also Read: ಹಾಥ್ರಸ್‌ ನಂತರ ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿಯ ಮೇಲೆ ಅತ್ಯಾಚಾರ

ಮೇಲಿನವರಾದ ಮೋದಿ, ಅಮಿತ್ ಶಾ, ಯೋಗಿ ವಗೈರೆ ವಗೈರೆಗಳು ಬಹುಶಃ ‘ತಾವು ಹೋಗೊಲ್ಲ, ಹೋಗುವವರನ್ನು ಬಿಡೊಲ್ಲ’ ಎಂಬ ನಿರ್ಧಾರಕ್ಕೆ ಬಂದಿರಬೇಕು. ಹಿಂದೆ ಬಿಜೆಪಿಯವರು ಗುಜರಾತ್ ಮಾಡೆಲ್ ಎನ್ನುತ್ತಿದ್ದರು. ಈಗ ಅದನ್ನು ಮರೆತಿದ್ದಾರೆ. ಬಿಜೆಪಿ ನಾಯಕರೀಗ ಯೋಗಿ ಮಾಡೆಲ್ ಎಂಬ ಹೊಸ ಮಂತ್ರವನ್ನು ಕಂಡುಕೊಂಡಿದ್ದಾರೆ. ಮೋದಿ ‘ತಾನು ತಿನ್ನೊಲ್ಲ, ತಿನ್ನುವವರಿಗೂ ಬಿಡೊಲ್ಲ’ ಎಂದು ಹೇಳಿದಂತೆ ಯೋಗಿ ‘ತಾವು ಹೋಗೊಲ್ಲ, ಹೋಗುವವರನ್ನು ಬಿಡೊಲ್ಲ’ ಎಂಬ ಘೋಷವಾಕ್ಯ ಅನುಸರಿಸುತ್ತಿದ್ದಾರೆ. ಇದೇ ಬಿಜೆಪಿ ನಾಯಕರ ಯೋಗಿ ಮಾಡೆಲ್!

ಇಷ್ಟಕ್ಕೂ ರಾಹುಲ್-ಪ್ರಿಯಾಂಕಾ ಅವರನ್ನು ತಡೆದದ್ದೇಕೆ?

ಕಳೆದ ವಾರ ಹಾಥ್ರಸ್ ನಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರವಾಗಿ ಆಕೆ ಸಾವನ್ನಪ್ಪಿದ ಘಟನೆ ಇನ್ನೂ ವ್ಯಾಪಕವಾಗಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಇದೇ ಉತ್ತರ ಪ್ರದೇಶದ ಬಲರಾಂಪುರದಲ್ಲಿ ಮತ್ತೊಂದು ದಲಿತ ಯುವತಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿದೆ.‌ ಆದರೂ ಆಳುವ ಸರ್ಕಾರ ನಿರ್ಲಜ್ಜತನದಿಂದ ಮತ್ತು ನಿರ್ಲಕ್ಷ್ಯದಿಂದ ವರ್ತಿಸಿದಾಗ ಸಹಜವಾಗಿಯೇ ಸಾರ್ವಜನಿಕರ ಆಕ್ರೋಶ ದುಪ್ಪಟ್ಟಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಾಥ್ರಸ್‌ಗೆ ಭೇಟಿಕೊಡಲು ಹೊರಟಿದ್ದಾರೆ. ಅವರು ದಲಿತ ಯುವತಿಯ ಪೋಷಕರಿಗೆ ಸಾಂತ್ವನ ಹೇಳಲೆಂದು ಹೊರಟಿರುವುದಾಗಿ ಬೆಳಿಗ್ಗೆಯಿಂದ ಎಲ್ಲಾ ರಾಷ್ಟ್ರೀಯ ವಾಹಿನಿಗಳು ವರದಿ ಮಾಡಿವೆ. ಆದರೂ ಅವರನ್ನು ತಡೆಯಲಾಗಿದೆ.

Also Read: ಅತ್ಯಾಚಾರ ಆರೋಪಿಗಳ ಬೆಂಬಲಕ್ಕೆ ನಿಂತ ʼಸವರ್ಣ ಪರಿಷದ್ʼ: ಹಾಥ್ರಸ್ ಪ್ರಕರಣದಲ್ಲಿ ಜಾತಿ ಆಯಾಮದ ಪ್ರಾಮುಖ್ಯತೆ

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ತಡೆಯಲು ಉತ್ತರ ಪ್ರದೇಶದ ಪೊಲೀಸರು ಕೊಟ್ಟಿರುವು ಪಿಳ್ಳೆ ನೆಪವನ್ನು. ಕೋವಿಡ್ ಮಾರ್ಗಸೂಚಿ ಪ್ರಕಾರ ಅವರನ್ನು ಹಾಥ್ರಸ್ ಊರಿಗೆ ಕಳುಹಿಸಲು ಸಾಧ್ಯವಿಲ್ಲವೆಂದು ತಡೆದಿದ್ದಾರೆ. ಆದರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬರುತ್ತಿದ್ದಾರೆಂದು ಒಂದೇ ಜಾಗದಲ್ಲಿ ನೂರಾರು ಮಂದಿ ಪೊಲೀಸರನ್ನು ನಿಯೋಜಿಸಿದ್ದು ಕೋವಿಡ್ ಮಾರ್ಗಸೂಚಿಯ ಉಲ್ಲಂಘನೆ ಅಲ್ಲವೇ? ಇಷ್ಟಕ್ಕೂ ರಾಹುಲ್ ಗಾಂಧಿ ಅವರು ‘ಕಾರ್ಯಕರ್ತರೆಲ್ಲರನ್ನೂ ಬಿಡಬೇಡಿ, ನಮ್ಮಿಬ್ವರಿಗೆ (ಪ್ರಿಯಾಂಕಾ ಗಾಂಧಿ) ಅವಕಾಶ ಕೊಡಿ’ ಎಂದು ಕೇಳಿದ್ದಾರೆ. ಆಗಲಾದರೂ ಅವಕಾಶ ಮಾಡಿಕೊಡಬಹುದಿತ್ತಲ್ಲವೇ?

Also Read: FACT CHECK: ವೈರಲ್ ಆದ ಚಿತ್ರದಲ್ಲಿರುವುದು ಅತ್ಯಾಚಾರದ ಸಂತ್ರಸ್ತೆಯೇ ಅಲ್ಲ

‌ಇದಲ್ಲದೆ ಟ್ರಾಫಿಕ್ ಜಾಮ್ ನೆಪ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬರುತ್ತಿದ್ದಾರೆ. ಜೊತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬರುತ್ತಿದ್ದಾರೆ ಎಂಬುದನ್ನು ಗ್ರಹಿಸಲಾರದಷ್ಟು ಬುದ್ಧಿಹೀನರಾಗಿದ್ದಾರೆಯೇ ಉತ್ತರ ಪ್ರದೇಶದ ಪೊಲೀಸರು? ಇದಕ್ಕೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತಲ್ಲವೇ? ಇವೆಲ್ಲವೂ ಕಾರಣಗಳು; ‘ಅವರು (ಪೊಲೀಸರು ಮಾತ್ರವಲ್ಲ, ಬಿಜೆಪಿ ನಾಯಕರಿಗೆ) ‘ತಾವು ಹೋಗಲ್ಲ, ಹೋಗುವವರನ್ನು ಬಿಡೊಲ್ಲ’ ಎಂದು ನಿರ್ಧರಿಸಿದ್ದಾರೆ ಅಷ್ಟೇ.

Tags: Priyanka Gandhi VadraRahul Gandhiಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ
Previous Post

ಮೈಸೂರಿನಲ್ಲಿ ಕರೋನಾ ಸೋಂಕಿಗೆ ತುತ್ತಾದ 25 ಶಿಕ್ಷಕರು

Next Post

ಹಾಥ್ರಾಸ್‌: ಅತ್ಯಾಚಾರವೇ ನಡೆದಿಲ್ಲ ಎಂದ ಪೊಲೀಸರು

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಹಾಥ್ರಾಸ್‌: ಅತ್ಯಾಚಾರವೇ ನಡೆದಿಲ್ಲ ಎಂದ ಪೊಲೀಸರು

ಹಾಥ್ರಾಸ್‌: ಅತ್ಯಾಚಾರವೇ ನಡೆದಿಲ್ಲ ಎಂದ ಪೊಲೀಸರು

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada