• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್

by
October 27, 2020
in ಕರ್ನಾಟಕ
0
ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್
Share on WhatsAppShare on FacebookShare on Telegram

ದೇಶವನ್ನೇ ಬೆಚ್ಚಿ ಬೀಳಿಸಿದ, ವ್ಯಾಪಕ ಆಕ್ರೋಶಕ್ಕೆ ಕಾರಣವಾದ ತೂತುಕುಡಿ ಲಾಕಪ್‌ ಡೆತ್‌ ಕುರಿತಂತೆ ಸಿಬಿಐ ದೋಷಾರೊಪಣಾ ಪಟ್ಟಿ ಸಲ್ಲಿಸಿದ್ದು, ದೋಷಾರೊಪಣಾ ಪಟ್ಟಿಯಲ್ಲಿ, ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟ ತಂದೆ-ಮಗನಿಗೆ ಸಂಜೆ 7-45 ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ಪೊಲೀಸರು ಸತತವಾಗಿ ಥಳಿಸಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪೊಲೀಸರು ತಂದೆ ಮಗನಿಗೆ 6 ರಿಂದ 7 ಗಂಟೆಗಳ ಕಾಲ ಕ್ರೂರವಾಗಿ ಥಳಿಸಿದ್ದು, ಹಲ್ಲೆಯ ತೀವೃತೆಗೆ ಠಾಣೆಯ ಗೋಡೆಗಳು ರಕ್ತಮಯವಾಗಿತ್ತು ಎಂದು ವಿಧಿವಿಜ್ಞಾನ (forensic) ಸಾಕ್ಷ್ಯಗಳು ಸಾಬೀತುಪಡಿಸಿದೆ.

ಜೂನ್ 19 ರಂದು ಲಾಕ್‌ಡೌನ್‌ ಮಾರ್ಗಸೂಚಿಗಳನ್ನು ಮೀರಿ 15 ನಿಮಿಷಗಳ ಕಾಲ ತಮ್ಮ ಮೊಬೈಲ್ ಫೋನ್ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ತೂತುಕುಡಿ ನಿವಾಸಿ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಬಂಧಿಸಲಾಗಿತ್ತು.

Also Read: ತೂತುಕುಡಿ ಲಾಕಪ್‌ ಡೆತ್:‌ ಆರೋಪಿ ಪೋಲಿಸ್‌ ಕರೋನಾಗೆ ಬಲಿ

ಪೊಲೀಸರ ಕ್ರೂರ ಹಲ್ಲೆಯ ಪರಿಣಾಮ ತಂದೆ ಮಗ ಇಬ್ಬರೂ ಸಾವನ್ನಪ್ಪಿದ್ದರು. ಅಮೇರಿಕಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಜಾರ್ಜ್‌ ಫ್ಲಾಯ್‌ಡ್‌ ಬಲಿಯಾದ ಕೆಲವೇ ದಿನಗಳಲ್ಲಿ ಇದು ನಡೆದಿತ್ತು.

ಹಲವು ಸುತ್ತಿನ ಚಿತ್ರಹಿಂಸೆಗೆ ಒಳಗಾದ ತಂದೆ-ಮಗ ತಮ್ಮ ತೀವೃವಾದ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿಗಳು ತಿಳಿಸಿವೆ.

ತಮ್ಮ ಅಪರಾಧವನ್ನು ಮುಚ್ಚಿಹಾಕಲು ಪೊಲೀಸರು, ಬೆನಿಕ್ಸ್‌ ಹಾಗೂ ಜಯರಾಜ್‌ ವಿರುದ್ಧ ಸುಳ್ಳು ಎಫ್‌ ಐ ಆರ್‌ ದಾಖಲಿಸಿದ್ದಾರೆ. ತಂದೆ-ಮಗ ಯಾವುದೇ ಕೋವಿಡ್‌ ಮಾರ್ಗ ಸೂಚಿಯನ್ನು ಉಲ್ಲಂಘಿಸಿರಲಿಲ್ಲ ಎಂದು ಸಿಬಿಐ ತನಿಖೆ ಬಹಿರಂಗಪಡಿಸಿದೆ.

Also Read: ಜಯರಾಜ್ ಮತ್ತು ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣ; ಸುಚಿತ್ರಾ ವೈರಲ್ ವಿಡಿಯೋ ಡಿಲೀಟ್ ಮಾಡಲು ಸೂಚನೆ

ಮಾತ್ರವಲ್ಲದೆ, ಸಾಕ್ಷ್ಯ ನಾಶಪಡಿಸಲು ಪೊಲೀಸರು, ರಕ್ತ ಸಿಕ್ತ ಉಡುಪನ್ನು ಸರ್ಕಾರಿ ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

ಇಬ್ಬರನ್ನು ಥಳಿಸಲಾಯಿತು ಎಂದು ಹೇಳಲಾದ ದಿನದ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇರಲಿಲ್ಲ. ಸಿಸ್ಟಂನ ಹಾರ್ಡ್ ಡಿಸ್ಕ್ನಲ್ಲಿ ಸಾಕಷ್ಟು ಶೇಖರಣಾ ಸ್ಥಳವಿದ್ದರೂ ಪೊಲೀಸ್ ಠಾಣೆಯಲ್ಲಿ ಭದ್ರತಾ ಕ್ಯಾಮೆರಾಗಳನ್ನು ಪ್ರತಿದಿನ ಸ್ವಯಂಚಾಲಿತವಾಗಿ ದೃಶ್ಯಗಳನ್ನು ಅಳಿಸುವ ಪ್ರೋಗ್ರಾಮ್ ಮಾಡಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

Tags: ತೂತುಕುಡಿ
Previous Post

ಚಲನಚಿತ್ರ ನಟರು ಸಾಮಾಜಿಕ ಕಾರ್ಯಕರ್ತರಾಗುವ ಸಾಮರ್ಥ್ಯ ಹೊಂದಿಲ್ಲ – ಚೇತನ್

Next Post

ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ: ನಿಖಿಲ್ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!