ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದ್ದು, ಕಾಂಗ್ರೆಸ್ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ನರೂ ಸಹ ಮಹತ್ವದ ಮಾತುಕತೆ ನಡೆಸಿದ್ದಾರೆ.

ಪ್ರಮುಖವಾಗಿ ಹೈಕಮಾಂಡ್ ನಾಯಕರೊಂದಿಗಿನ ಹೈ ವೋಲ್ಟೇಜ್ ಸಭೆಗೂ ಮುನ್ನ ಇಬ್ಬರೂ ನಾಯಕರು ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಯೋಜಿಸಿರುವಂತೆ ಮೂರು ಸುತ್ತಿನ ಸಭೆಗಳ ಬಳಿಕ ಅಂತಿಮ ತೀರ್ಮಾನ ಹೊರಬೀಳಲಿದೆ.
ಇದನ್ನೂ ಓದಿ : ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ
ವಿಶೇಷ ಏನೆಂದರೆ ಇಬ್ಬರೂ ನಾಯಕರು ಬೆಳಗ್ಗೆ ಕರ್ನಾಟಕ ಭವನದಲ್ಲಿ ಇದ್ದರೂ ಪರಸ್ಪರ ಭೇಟಿಯಾಗಿರಲಿಲ್ಲ. ಆದರೆ ಎಐಸಿಸಿ ಕಚೇರಿಯಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇನ್ನೂ ಇದೇ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್ ನಾಯಕರೂ ಸಹ ಪ್ಯತ್ಯೇಕವಾದ ಸಭೆಗಳನ್ನು ನಡೆಸಿದ್ದಾರೆ. ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ , ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಪ್ರತ್ಯೇಕ ಚರ್ಚೆ ನಡೆಸಿರುವುದು ಕೂಡ ಸದ್ಯದ ಸ್ಥಿತಿಯ ಬಗ್ಗೆ ಎಲ್ಲರಲ್ಲೂ ಹೈಕಮಾಂಡ್ ನಡೆಯ ಬಗ್ಗೆ ತೀವ್ರ ಕುತೂಹಲ ಮೂಡಿದೆ.





