ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ನಡೆದಿದೆ. ರಾಜ್ಯಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸುವ ಮೂಲಕ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಮತ್ತೆ ಸುದ್ದಿಲ್ಲಿದ್ದಾರೆ.
ದೆಹಲಿಯಲ್ಲಿರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳನ್ನು ಕೇವಲ ಸ್ಥಳೀಯರಿಗೆ ಮಾತ್ರ ಮೀಸಲಿಡಬೇಕು, ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ಈ ಆದೇಶವನ್ನು ರದ್ದುಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಆದೇಶ ಹೊರಡಿಸಿದ್ದಾರೆ.
ಕಳೆದ ಭಾನುವಾರವಷ್ಟೇ ಅರವಿಂದ್ ಕೇಜ್ರಿವಾಲ್ “ದೆಹಲಿಯ ಆಸ್ಪತ್ರೆಗಳು ಅಂತರ್ರಾಜ್ಯ ರೋಗಿಗಳಿಂದ ತುಂಬುತ್ತಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ರಾಜ್ಯದಲ್ಲಿನ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೇವಲ ದೆಹಲಿಯ ಜನರಿಗೆ ಮಾತ್ರ ಚಿಕಿತ್ಸೆ ನೀಡಲಿವೆ ಎಂದು,” ಎಂದು ಹೇಳಿದ್ದರು.