ಶನಿವಾರ ಬೆಳಿಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಾರಿಯ ನನ್ನ ದೆಹಲಿ ಪ್ರವಾಸ ಯಶಸ್ವಿಯಾಗಿದೆಯೆಂದು ಹೇಳಿಕೆ ನೀಡಿದ್ದಾರೆ. ಈಗಾಗಲೇ ವೆಂಕಯ್ಯನಾಯ್ಡು ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯಕ್ಕೆ ಹೆಚ್ಚಿನ ನೆರವು ನೀಡುವುದಾಗಿ ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಚಿವ ಸಂಪುಟದ ಬಗ್ಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಚರ್ಚೆ ನಡೆಸಿದ್ದು, ಇವತ್ತು ಜೆಪಿ ನಡ್ಡಾ ಹಾಗೂ ಪ್ರಧಾನಿ ಚರ್ಚೆ ಮಾಡಲಿದ್ದಾರೆ. ಹಾಗೂ ಇಂದೇ ಮುಂದಿನ ಕಾರ್ಯತಂತ್ರಕ್ಕೆ ತಕ್ಕಂತೆ ನಡ್ಡಾ ಸೂಚನೆ ಕೊಡಬಹುದು ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Also Read: ವಿರೋಧಗಳ ನಡುವೆಯೂ ಪುತ್ರ ವ್ಯಾಮೋಹ ಬಿಡಲೊಲ್ಲದ ಸಿಎಂ ಬಿಎಸ್ವೈ
ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಎಂಬುವುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದ್ದು, ಎಷ್ಟು ಜನರನ್ನು ಸೇರಿಸಿಕೊಳ್ಳಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧರಿಸಲಿದೆ. ದೆಹಲಿ ನಾಯಕರ ಆಧಾರದ ಮೇಲೆ ಮಂತ್ರಿಮಂಡಲವನ್ನು ನಿರ್ಧರಿಸುತ್ತೇನೆ. ವಿಧಾಣ ಸಭಾ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆನ್ನುವುದು ನನ್ನದೂ ಉದ್ದೇಶ ಎಂದು ಬಿಎಸ್ವೈ ಹೇಳಿದ್ದಾರೆ.