ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1498 ಹೊಸ ಪ್ರಕರಣಗಳು ಕಂಡುಬಂದಿದ್ದು, ರಾಜ್ಯದಲ್ಲಿ ಕರೋನಾ ಸೋಂಕು ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 26,815 ತಲುಪಿದೆ. 571 ಮಂದಿ ಸೋಂಕಿತರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದು, ಒಟ್ಟು 11098 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಇಂದು ರಾಜ್ಯದಲ್ಲಿ 15 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 416 ತಲುಪಿದೆ. 15,297 ಸಕ್ರಿಯ ಪ್ರಕರಣಗಳಿರುವ ರಾಜ್ಯದಲ್ಲಿ 279 ಮಂದಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಅಂಕಿ ಅಂಶದ ಪ್ರಕಾರ ದೇಶಾದ್ಯಂತ 22,252 ಹೊಸ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ 2,59,557 ಸಕ್ರಿಯ ಪ್ರಕರಣಗಳಿದೆ. ಇಂದು 15,515 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದಾರೆ. ಒಟ್ಟು 4,39,948 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ 20,160 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ.