ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ. 61.80 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ದಾಖಲಾಗಿದ್ದು (90.71) ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ (90.71) ಕೊಡಗು ಶೇ. 81.53 ಫಲಿತಾಂಶದೊಂದಿಗೆ ತೃತೀಯ ಸ್ಥಾನದಲ್ಲಿದೆ. ಈ ಬಾರಿಯ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 76.2%, ವಾಣಿಜ್ಯ ವಿಭಾಗದಲ್ಲಿ 65.52% ಹಾಗೂ ಕಲಾ ವಿಭಾಗದಲ್ಲಿ 41.27% ಫಲಿತಾಂಶ ಬಂದಿದೆ. ಈ ವರ್ಷ ಒಟ್ಟು 6,83,277 ಪರೀಕ್ಷೆ ಬರೆದಿದ್ದು ಅದರಲ್ಲಿ 4,17,297 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕಾರ್ಕಳ ತಾಲ್ಲೂಕಿನ ಸರ್ಕಾರಿ ಪಿಯು ಕಾಲೇಜು ಹಾಗೂ ಕಡೂರಿನ ಜೋಡಿಹೊಚ್ಚಿಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ಶೇ. 100 ಫಲಿತಾಂಶ ದೊರಕಿದೆ.
ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ www.karresults.nic.in