2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿರುವ ರೀತಿಗೆ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಬೇಡಿಕೆಗಳಿಗೆ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಶನಿವಾರ ಪ್ರತಿಕ್ರಿಯಿಸಿದ್ದಾರೆ.
ಸೈನಿಕರನ್ನು ಸುರಕ್ಷಿತೆಯನ್ನು ನರೇಂದ್ರ ಮೋದಿ ಸರ್ಕಾರದಲ್ಲಿ ನಿರೀಕ್ಷಿಸಿದ್ದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕೇ ಎಂದು ಟ್ವೀಟ್ ನಲ್ಲಿ ತರೂರ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
“ಕಾಂಗ್ರೆಸ್ ಪಕ್ಷ ಯಾಕೆ ಕ್ಷಮೆಯಾಚಿಸಬೇಕಿದೆ ಎಂಬುದನ್ನು ಕಂಡುಹಿಡಿಯಲು ನಾನು ಇನ್ನೂ ಪ್ರಯತ್ನಿಸುತ್ತಿದ್ದೇನೆ. ನಮ್ಮ ಸೈನಿಕರನ್ನು ಸುರಕ್ಷಿತವಾಗಿರಿಸಬೇಕೆಂದು ಸರ್ಕಾರ ನಿರೀಕ್ಷಿಸಿದ್ದಕ್ಕಾಗಿಯೇ? ರಾಷ್ಟ್ರೀಯ ದುರಂತವನ್ನು ರಾಜಕೀಯಗೊಳಿಸುವುದಕ್ಕಿಂತ ಹೆಚ್ಚಾಗಿ ಧ್ವಜದ ಸುತ್ತ ಸುತ್ತಿದ್ದಕ್ಕಾಗಿಯೇ? ಅಥವಾ ನಮ್ಮ ಹುತಾತ್ಮರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಕ್ಕಾಗಿಯೇ? ” ಎಂದು ಶಶಿ ತರೂರ್ ಪ್ರಶ್ನಿಸಿದ್ದಾರೆ.
Also Read: ಪುಲ್ವಾಮ ದಾಳಿ ಇಮ್ರಾನ್ ಸರ್ಕಾರದ ಅತೀ ದೊಡ್ಡ ಯಶಸ್ಸು – ಪಾಕ್ ಸಂಸದ
ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದೆಯೆಂದು ಪಾಕಿಸ್ತಾನ ಸಚಿವರು ಒಪ್ಪಿಕೊಂಡಿರುವ ಬೆನ್ನಲ್ಲಿ ಬಿಜೆಪಿ ನಾಯಕ, ಕೇಂದ್ರ ಮಂತ್ರಿ ಪ್ರಕಾಶ್ ಜಾವೇಡ್ಕರ್ ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದರು. “ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ತನ್ನ ಕೈವಾಡವನ್ನು ಒಪ್ಪಿಕೊಂಡಿದೆ. ಈಗ, ಪಿತೂರಿ ಸಿದ್ಧಾಂತಗಳ ಬಗ್ಗೆ ಮಾತನಾಡಿದ ಕಾಂಗ್ರೆಸ್ ಮತ್ತು ಇತರರು ದೇಶಕ್ಕೆ ಕ್ಷಮೆಯಾಚಿಸಬೇಕು ”ಎಂದು ಜಾವಡೇಕರ್ ಹೇಳಿರುವ ವರದಿಯನ್ನು ಶಶಿ ತರೂರ್ ಉಲ್ಲೇಖಿಸಿದ್ದಾರೆ.
ಇನ್ನೊಂದು ಟ್ವೀಟಿನಲ್ಲಿ ಪುಲ್ವಾಮ ದಾಳಿಯ ಬಗ್ಗೆ ತನಿಖೆಯೂ ಆಗಬೇಕೆಂದು ಶಶಿ ತರೂರ್ ಆಗ್ರಹಿಸಿದ್ದಾರೆ.
40 ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿಯ ಸಾವಿಗೆ ಕಾರಣವಾದ, ಉಭಯ ದೇಶಗಳನ್ನು ಯುದ್ಧದ ಆತಂಕಕ್ಕೆ ತಂದಿಟ್ಟ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ಪಾಕಿಸ್ತಾನದ ಹಿರಿಯ ಸಚಿವ ಫವಾದ್ ಚೌಧರಿ ಕಳೆದ ದಿನಗಳಲ್ಲಿ ಒಪ್ಪಿಕೊಂಡಿದ್ದರು. ʼʼಪುಲ್ವಾಮಾದಲ್ಲಿ ನಮ್ಮ ಯಶಸ್ಸು ಇಮ್ರಾನ್ ಖಾನ್ ನೇತೃತ್ವದಲ್ಲಿ ಈ ರಾಷ್ಟ್ರದ ಯಶಸ್ಸಾಗಿದೆ. ನೀವು ಮತ್ತು ನಾವೆಲ್ಲರೂ ಆ ಯಶಸ್ಸಿನ ಭಾಗವಾಗಿದ್ದೇವೆ” ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಹೇಳಿದರು. ನಂತರ ತನ್ನ ಮಾತನ್ನು ತಿದ್ದಿಕೊಂಡ ಚೌಧರಿ, ತಾನು ತಪ್ಪಾಗಿ ಉಚ್ಛರಿಸಿದ್ದೇನೆ, ಪುಲ್ವಾಮ ನಂತರದ ಘಟನೆಗಳನ್ನು ನಿರ್ವಹಿಸಿದರಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಹೇಳಲು ಉದ್ದೇಶಿಸಿದ್ದೆ ಎಂದು ಅವರು ಹೇಳಿಕೆ ನೀಡಿದ್ದರು.