ನಾನು ಹಿಂದೆ ಸಿಎಂ ಆಗಿದ್ದಾಗ ನನಗೆ ಒಳ್ಳೆಯ ಹೆಸರು ಇತ್ತು. ಆದರೆ ಪ್ರೀ ಪ್ಲ್ಯಾನ್ ಮಾಡಿ ಸಿದ್ದರಾಮಯ್ಯ ಮತ್ತು ತಂಡ ನನ್ನ ಹೆಸರು ಹಾಳು ಮಾಡಿದ್ದಾರೆ. ಕಾಂಗ್ರೆಸ್‌ನಿಂದಲೇ ಎಲ್ಲವೂ ಸರ್ವನಾಶವಾಯಿತು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಮೋಷನಲ್ ಟ್ರ್ಯಾಪ್‌ಗೆ ನಾವು ಬಲಿಯಾದೆವು. ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಕಾರಣ ನಮ್ಮ ಶಕ್ತಿ ಕುಂದಿತು. ಸಿದ್ದರಾಮಯ್ಯ ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಪ್ರೀ ಪ್ಲ್ಯಾನ್ ಮಾಡಿ ಸಿದ್ದರಾಮಯ್ಯ ಅಂಡ್ ಟೀಂ ನನ್ನ ಹೆಸರು ಹಾಳು ಮಾಡಿದರು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಾಂಗ್ರೆಸ್ ಸೋಲು ಗೆಲುವು ಜೆಡಿಎಸ್ ಮೇಲೆ ನಿಂತಿದೆ ಎಂದು ಅವರಿಗೆ ಗೊತ್ತಾಗಿದೆ. ಸಿದ್ದರಾಮಯ್ಯ ಅವರಿಂದ ಕಳೆದ ಬಾರಿ ಬಿಜೆಪಿಗೆ 105 ಸ್ಥಾನ ಬಂತು. ಜೆಡಿಎಸ್ ಬಿಜೆಪಿ ಬಿ ಟೀಂ ಎಂದು ಅಪಪ್ರಚಾರದಿಂದ ಬಂದಿದೆ. ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತಾರೆ ನನಗೆ ಗೊತ್ತಿಲ್ಲವಾ, ಇತ್ತೀಚೆಗೆ ಯಾರನ್ನು ಭೇಟಿ ಮಾಡಿದ್ದರು ? ನಾನು ಯಾರನ್ನು ಗೌಪ್ಯವಾಗಿ ಭೇಟಿ ಮಾಡಲ್ಲ. ನಾನು ರಾತ್ರಿ ಅಥವಾ ಗುಟ್ಟಾಗಿ ಭೇಟಿಯಾಗುವುದಿಲ್ಲ ಎಲ್ಲರನ್ನೂ ಬಹಿರಂಗವಾಗಿಯೇ ಭೇಟಿ ಮಾಡುತ್ತೇನೆ ಎಂದು ಸಿದ್ಧರಾಮಯ್ಯಗೆ ಟಾಂಗ್ ನೀಡಿದ್ದಾರೆ.
ಮೈತ್ರಿ ಮಾಡಿಕೊಂಡ ಮೊದಲ ದಿನವೇ ನನ್ನ ಹೆಸರು ಕೆಡುತ್ತಿರುವುದು ಗೊತ್ತಾಯ್ತು. ಆದರೂ ಅವರ ಜೊತೆ ಕೈ ಜೊಡಿಸಿದೆ. ಬಿಜೆಪಿ ವಿರುದ್ದ ಒಂದು ಸಂದೇಶ ನೀಡುವ ಉದ್ದೇಶ ಇತ್ತು. ಇದೆ ಕಾರಣಕ್ಕೆ ಅವರಿಗೆ ಗೌರವ ಕೊಟ್ಟೆ. ಅಧಿಕಾರದಲ್ಲೇ ಉಳಿಯಬೇಕಿದ್ದರೆ ನನಗೇನು ಕಷ್ಟ ಇರಲಿಲ್ಲ. ಇದೊಂದು ತಾತ್ಕಾಲಿಕ ಡ್ಯಾಮೆಜ್ ಅಷ್ಟೇ. ಇದನ್ನ ಜನವರಿಯಿಂದ ಸರಿಪಡಿಸಿಕೊಳ್ಳುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಗೆ 105 ಸ್ಥಾನ ಬರಲು ಸಿದ್ದರಾಮಯ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮ ಪಕ್ಷವನ್ನು ಬಿ ಟೀಂ ಎಂದು ಪದೇ ಪದೇ ಹೇಳಿ ಬಿಜೆಪಿಗೆ ಹೆಚ್ಚು ಸ್ಥಾನ ಬರುವಂತೆ ಮಾಡಿದರು. ಈಗಲೂ ವಿಪಕ್ಷವಾಗಿ ಕಾಂಗ್ರೆಸ್ ಗಟ್ಟಿಯಾದ ವಿಚಾರ ಹಿಡಿದುಕೊಂಡು ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತಿಲ್ಲ ಎಂದು ದೂರಿದ್ದಾರೆ.