ಕೇಂದ್ರ ಬಜೆಟ್ಗೆ ಕ್ಷಣಗಣನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವತ್ತು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಗುಡ್ನ್ಯೂಸ್ಗಳ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಸಿಲಿಂಡರ್ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.
ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತದಲ್ಲಿ 1869 ರೂಪಾಯಿನಿಂದ 1887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1708 ರೂಪಾಯಿಯಿಂದ 1723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1924.70 ರೂಪಾಯಿಯಿಂದ 1937 ರೂಗೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಲೆಕ್ಕದ ಮೇಲೆ ಹಲವು ನಿರೀಕ್ಷೆಗಳಿವೆ. ಇದರ ಮಧ್ಯೆ, ಈ ಬಾರಿಯ ಬಜೆಟ್ ಮೇಲೆ ದೊಡ್ಡ ದೊಡ್ಡ ಘೋಷಣೆಗಳು ಇಲ್ಲ. ಜೂನ್ನಲ್ಲಿ ನಡೆಯಲಿರುವ ಪೂರ್ಣಾವಧಿ ಬಜೆಟ್ನಲ್ಲಿ ಅವೆಲ್ಲ ಇರಲಿವೆ ಎನ್ನಲಾಗುತ್ತಿದೆ. ಚುನಾವಣಾ ಕಾಲದಲ್ಲಿ ಮಂಡನೆಯಾಗುವ ಮಧ್ಯಂತರ ಬಜೆಟ್ನಲ್ಲೂ ಈ ಹಿಂದೆ ಮಹತ್ವದ ಯೋಜನೆಗಳು ಘೋಷಣೆಯಾಗಿವೆ. ಪಿಎಂ ಮೋದಿ ಮೂರನೇ ಬಾರಿಗೆ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.