ಕರ್ನಾಟಕ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಕರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಕುರಿತಂತೆ ಸ್ವತಃ ಬೊಮ್ಮಾಯಿ ಅವರೇ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮಂಗಳವಾರದಂದು ಬೊಮ್ಮಾಯಿ ಮನೆ ಕೆಲಸಗಾರನಿಗೆ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಗೃಹಮಂತ್ರಿಯೂ ಕರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಪರೀಕ್ಷಾ ವರದಿಯಲ್ಲಿ ಕರೋನಾ ಪಾಸಿಟಿವ್ ಇರುವುದು ಧೃಡಪಟ್ಟಿದೆ.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
— Basavaraj S Bommai (@BSBommai) September 16, 2020
ಬೊಮ್ಮಾಯಿಯವರ ನೇರ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಹಾಗೂ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅವರು ಕೋರಿದ್ದಾರೆ.