• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ನನ್ನ ವಿರುದ್ಧ ಟೀಕೆಗೆ ಜಾತಿ ಕಾರ್ಡ್ ಬಳಸುತ್ತಿದೆ: ಡಿ ಕೆ ಶಿವಕುಮಾರ್

by
October 26, 2020
in ಕರ್ನಾಟಕ
0
ಬಿಜೆಪಿ ನನ್ನ ವಿರುದ್ಧ ಟೀಕೆಗೆ ಜಾತಿ ಕಾರ್ಡ್ ಬಳಸುತ್ತಿದೆ: ಡಿ ಕೆ ಶಿವಕುಮಾರ್
Share on WhatsAppShare on FacebookShare on Telegram

ಡಿಕೆ ಶಿವಕುಮಾರ್ ಉಪಚುನಾವಣೆಯಲ್ಲಿ ಜಾತಿ ಕಾರ್ಡ್ ಬಳಸುತ್ತಿದ್ದಾರೆಂದು ಬಿಜೆಪಿ ಹಿರಿಯ ನಾಯಕರ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

‘ಉಪಚುನಾವಣೆಯಲ್ಲಿ ನಾನು ಜಾತಿ ಕಾರ್ಡ್ ಬಳಸುತ್ತಿದ್ದೇನೆ ಎಂದು ಆರೋಪ ಮಾಡುತ್ತಿರುವ ಬಿಜೆಪಿ, ನನ್ನ ವಿರುದ್ಧ ಟೀಕೆ ಮಾಡಲು ಅಶ್ವತ್ಥ್ ನಾರಾಯಣ್, ಅಶೋಕ್, ಸೋಮಶೇಖರ್, ಸಿ.ಟಿ ರವಿ ಅವರನ್ನು ಬಿಟ್ಟು ಯಾವ ಕಾರ್ಡ್ ಬಳಸುತ್ತಿದೆ?’ ಎಂದು ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬಿಜೆಪಿ ನನ್ನ ಮೇಲೆ ಟೀಕೆ ನಡೆಸಲು ಮಂತ್ರಿ ಮಂಡಲದಲ್ಲಿರುವ ಒಕ್ಕಲಿಗ ಮುಖಂಡರನ್ನೇ ಛೂ ಬಿಟ್ಟಿದೆ. ಒಕ್ಕಲಿಗ ಜಾತಿ ಕಾರ್ಡನ್ನೇ ಬಳಸಿಕೊಳ್ಳುತ್ತಿದೆ ಎಂದು ಅವರು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್ ‘ಪಕ್ಷ ಬಿಟ್ಟು ಬಿಜೆಪಿಗೆ ಹೋಗಲು ನಾನು ಕಾರಣ ಎಂದು ಹೇಳಿರುವವರಿಗೆ ಒಳ್ಳೆಯದಾಗಲಿ. ಹಬ್ಬದ ದಿನ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರಿಗೆ ಆದಷ್ಟು ಬೇಗನೆ ಬಡ್ತಿ ಸಿಗಲಿ,’ ಎಂದು ಕುಟುಕಿದ್ದಾರೆ.

‘ಅವರಿಗೆ ಮಾರ್ಕೆಟ್ ಬೇಕು, ಪ್ರಮೋಷನ್ ಬೇಕು ಎಂದು ನನ್ನ ಬಗ್ಗೆ ಹಾಗೂ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ನಮ್ಮ ಬಗ್ಗೆ ಮಾತನಾಡಿದರೆ ಮಾಧ್ಯಮಗಳು ಚೆನ್ನಾಗಿ ಪ್ರಚಾರ ಮಾಡುತ್ತವೆ. ಇಲ್ಲವಾದರೆ ಅವರನ್ನು ತೋರಿಸುವುದಿಲ್ಲ. ಹೀಗಾಗಿ ಅವರು ನನ್ನ ಹಾಗೂ ಸಿದ್ದರಾಮಯ್ಯನವರ ಹೆಸರನ್ನು ಎಲ್ಲೆಲ್ಲಿ ಬಳಸಿಕೊಳ್ಳಬೇಕೋ ಅಲ್ಲಿ ಯಥೇಚ್ಛವಾಗಿ ಬಳಸಿಕೊಳ್ಳುತ್ತಿದ್ದಾರೆ.’ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

‘ಕೆಲವರು ಕಾಂಗ್ರೆಸ್ಸಿಗೆ ಬೀಳುವ ಅಲ್ಪಸಂಖ್ಯಾತರ ಮತಗಳನ್ನು ತಪ್ಪಿಸಲು ಮತದಾರರ ಗುರುತಿನ ಚೀಟಿ ಕಸಿದುಕೊಳ್ಳುತ್ತಿದ್ದಾರೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಯಾರು ಹೆದರಿಸುತ್ತಿದ್ದಾರೆ ಎಂಬುದರ ಬಗ್ಗೆ ಮತದಾರರೇ ಉತ್ತರ ನೀಡಲಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಎಲ್ಲರೂ ತಮ್ಮ ಜವಾಬ್ದಾರಿ ನಿಭಾಯಿಸುತ್ತಾರೆ:

ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಕೆಲವರು ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ಶಿಸ್ತು ಸಮಿತಿ ಸದಸ್ಯ ಕೆ.ಬಿ. ಕೋಳಿವಾಡ ಅವರು ಖಂಡಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಪಕ್ಷದಲ್ಲಿ ಯಾರಿಗೆ ಯಾವ ಜವಾಬ್ದಾರಿ ವಹಿಸಿದ್ದೇವೋ ಅವರು ಆ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅದರಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ಚುನಾವಣೆ ಸಮಯ ಬರಲಿ, ಆಗ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡೋಣ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಬೇಕು. ನಮಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಈ ಸರ್ಕಾರವನ್ನು ರಾಜ್ಯದ ಜನ ಕಿತ್ತೆಸೆದ ಮೇಲೆ ಆ ಬಗ್ಗೆ ಮಾತನಾಡೋಣ. ಈಗ ಉಪಚುನಾವಣೆ ಬಗ್ಗೆ ಮಾತ್ರ ಮಾತನಾಡೋಣ.’ ಎಂದು ಹೇಳಿದ್ದಾರೆ.

ಜನರ ನೋವಿಗೆ ಸ್ಪಂದಿಸಲು ಸರ್ಕಾರ ವಿಫಲವಾಗಿದೆ:

‘ರಾಜ್ಯದಲ್ಲಿ ಪ್ರವಾಹ ಎದುರಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ರಾಜ್ಯ ಸರ್ಕಾರದ ನಿಯಂತ್ರಣದಲ್ಲಿ ಮಂತ್ರಿಗಳೂ ಇಲ್ಲ., ಅಧಿಕಾರಿಗಳು ನಿಯಂತ್ರಣದಲ್ಲಿ ಇಲ್ಲ. ಬಡವರ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ಯಾರಿಗೂ ಆಸಕ್ತಿ ಇಲ್ಲ. ಮುಖ್ಯಮಂತ್ರಿಗಳು ಕೇವಲ ಆಶ್ವಾಸನೆ ನೀಡುತ್ತಿದ್ದಾರೆ. ಕಳೆದ ವರ್ಷ ನೆರೆ ಸಮಯದಲ್ಲೂ ಕೇವಲ ಆಶ್ವಾಸನೆ ಕೊಟ್ಟರು. ಆದರೆ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಸರ್ಕಾರದ ಆದ್ಯತೆ ಕೇವಲ ಚುನಾವಣೆಯೇ ಹೊರತು ನೆರೆ ಸಂತ್ರಸ್ತರಲ್ಲ. ಜನರ ನೋವಿಗೆ ಸ್ಪಂದಿಸಲು ಸರ್ಕಾರ ವಿಫಲವಾಗಿದೆ. ದೆಹಲಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ತಮ್ಮದೇ ಪಕ್ಷದ ನಾಯಕರನ್ನು, ಸಂಸದರನ್ನು ಕರೆದುಕೊಂಡು ಹೋಗಿ ರಾಜ್ಯಕ್ಕೆ ಹಣ ತರಲು ಅವರಲ್ಲಿ ಶಕ್ತಿ ಇಲ್ಲ ಎಂದು ಖಾರವಾಗಿ ಸರ್ಕಾರವನ್ನು ಟೀಕಿಸಿದ್ದಾರೆ.

ನಾವೆಲ್ಲರೂ ಸಿದ್ದರಾಮಯ್ಯ ಜತೆ ಇದ್ದೇವೆ

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು. ಪಕ್ಷದ ಎಲ್ಲ ಶಾಸಕರು ಅವರ ಜತೆಗಿದ್ದೇವೆ. ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾವೆಲ್ಲರೂ ಅವರ ಜತೆ ಇದ್ದೆವು. ಇನ್ನೂ ಇರಲಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ದೂರು ದಾಖಲಿಸಿರುವುದು ಸಂತೋಷ

ನನ್ನ ಹೇಳಿಕೆ ವಿರುದ್ಧ ಬಿಜೆಪಿ ಕಾನೂನು ವಿಭಾಗ ಆಯೋಗಕ್ಕೆ ದೂರು ನೀಡಿದೆ ಸಂತೋಷ. ಆದರೆ ವಿಧಾನಸೌಧದಲ್ಲಿ ಶ್ರೀನಿವಾಸಗೌಡರು ತಮ್ಮ ಮನೆಗೆ ಅಶ್ವಥ್ ನಾರಾಯಣ ಅವರು 5 ಕೋಟಿ ರುಪಾಯಿ ತಂದಿದ್ದರು ಎಂದು ಹೇಳಿಕೆ ಕೊಟ್ಟಾಗ ಎಲ್ಲಿ ಹೋಗಿತ್ತು ಈ ಕಾನೂನು ವಿಭಾಗ? ಆಗ ಐಟಿ, ಸಿಬಿಐ ಸಂಸ್ಥೆಗಳು ಎಲ್ಲಿ ಹೋಗಿದ್ದವು? ಬಿಜೆಪಿ ಕಾನೂನು ವಿಭಾಗವು ಯಾಕೆ ಅವರಿಗೆ ನೋಟಿಸ್ ಕೊಡಲಿಲ್ಲ?’ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

Tags: BJPByElectionDKShivakumarRRNagar
Previous Post

ಕರ್ನಾಟಕ: 8 ಲಕ್ಷ ದಾಟಿದ ಒಟ್ಟು ಕರೋನಾ ಸೋಂಕಿತರ ಸಂಖ್ಯೆ

Next Post

ಬಿಜೆಪಿಯವರದ್ದು ತಟ್ಟೆ ಮತ್ತು ಜಾಗಟೆ ಬಡಿಯುವ ಹಿಂದುತ್ವ – ಉದ್ದವ್‌ ಠಾಕ್ರೆ ಟೀಕೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬಿಜೆಪಿಯವರದ್ದು ತಟ್ಟೆ ಮತ್ತು ಜಾಗಟೆ ಬಡಿಯುವ ಹಿಂದುತ್ವ – ಉದ್ದವ್‌ ಠಾಕ್ರೆ ಟೀಕೆ

ಬಿಜೆಪಿಯವರದ್ದು ತಟ್ಟೆ ಮತ್ತು ಜಾಗಟೆ ಬಡಿಯುವ ಹಿಂದುತ್ವ – ಉದ್ದವ್‌ ಠಾಕ್ರೆ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada