ಭಾರೀ ವಿವಾದ ಸೃಷ್ಟಿಸಿದ್ದ ಶಾಸಕ ಸಿದ್ದು ಸವದಿ ಹಾಗೂ ಬಿಜೆಪಿ ಕಾರ್ಯಕರ್ತರು ಮಹಿಳಾ ಸದಸ್ಯೆಯೋರ್ವರನ್ನು ಎಳೆದಾಡಿದ್ದ ಮಹಿಳೆ ಗರ್ಭಾಪಾತಕ್ಕೊಳಗಾಗಿದ್ದಾರೆ.
ಸಿದ್ದು ಸವದಿ ಹಾಗೂ ಬೆಂಬಲಿಗರು ಎಳೆದಾಡಿದಾಗ ಹಲ್ಲೆಗೊಳಗಾಗಿದ್ದ ಬಿಜೆಪಿ ಸದಸ್ಯೆ ಚಾಂದಿನಿ ನಾಯ್ಕ ಅವರು ಮೂರು ತಿಂಗಳ ಗರ್ಭಣಿಯಾಗಿದ್ದು, ಎಳೆದಾಟದ ಪರಿಣಾಮ ಗಾಯಗೊಂಡಿದ್ದ ಅವರು ಗರ್ಭಾಪಾತಕ್ಕೊಳಗಾಗಿದ್ದಾರೆ ಎನ್ನಲಾಗಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ನವೆಂಬರ್ 11 ರಂದು ಬಾಗಲಕೋಟೆಯ ಮಹಾಲಿಂಗಪುರಂ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆಯ ವೇಳೆ ಬಿಜೆಪಿಯ ಮೂವರು ಸದಸ್ಯೆಯರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರಿಂದ ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ಎದುರಾಗಿತ್ತು. ಮೂವರು ಸದಸ್ಯೆಯರು ಸಭೆಗೆ ಬಾರದಂತೆ ತಡೆಯಲು ಶಾಸಕ ಸಿದ್ದು ಸವದಿ ಹಾಗೂ ಬಿಜೆಪಿ ಕಾರ್ಯಕರ್ತರು ತಡೆದಿದ್ದಾರೆ.
ಈ ವೇಳೆ ಸಿದ್ದು ಸವದಿ ಹಾಗೂ ಬೆಂಬಲಿಗರು ಮಹಿಳಾ ಸದಸ್ಯೆಯರ ಮೇಲೆ ಬಲಪ್ರಯೋಗ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತೇರದಾಳ ಶಾಸಕರ ಈ ಅನುಚಿತ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ಶಾಸಕರ ತಳ್ಳಾಟದಲ್ಲಿ ಗಾಯಗೊಂಡ ಸದಸ್ಯೆ ಸವಿತಾ ಹುರಕಡ್ಲಿ, ಗೋದಾವರಿ ಭಾಟ್ ಹಾಗೂ ಚಾಂದಿನಿ ನಾಯ್ಕ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆಯ ಹಿನ್ನೆಲೆ: ಮಹಾಲಿಂಗಪುರ ಪುರಸಭೆಯ ಒಟ್ಟು 23 ಸದಸ್ಯರಲ್ಲಿ ಕಾಂಗ್ರೆಸ್ 10, ಬಿಜೆಪಿ 13 ಸ್ಥಾನಗಳನ್ನು ಹೊಂದಿವೆ. ನ.9ರಂದು ಸಂಜೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಬಿಜೆಪಿಯ ಮೂವರು ಸದಸ್ಯೆಯರು,ಅವಕಾಶ ಸಿಗದೇ ಇದ್ದಿದ್ದಕ್ಕೆ ಬೇಸತ್ತು, ಕಾಂಗ್ರೆಸ್‍ಗೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದರು. ಇದು ಬಿಜೆಪಿ ಶಾಸಕ ಸಿದ್ದುಸವದಿ ಮತ್ತು ಅವರ ಬೆಂಬಲಿಗರನ್ನು ಕೆರಳಿಸಿತ್ತು.