ಮೈಸೂರು: ಬಿಹಾರ ವಿಧಾನಸಭೆ ಚುನಾವಣೆಗೆ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು.
ಇನ್ನು ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನ ನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು
CM Siddaramaiah: ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!
ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...
Read moreDetails


