ಬೆಂಗಳೂರು ಉಗ್ರಗಾಮಿಗಳ ತಾಣವಾಗಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಭಾರಿ ಟೀಕೆಗೆ ಒಳಗಾಗಿದೆ. ಟೀಕೆಗಳ ಸರಣಿಗೆ ಈಗ ಹೆಚ್ ಡಿ ಕುಮಾರ್‌ಸ್ವಾಮಿ ಅವರು ಸೇರಿಕೊಂಡಿದ್ದಾರೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧ ಹೆಚ್‌ಡಿಕೆ ಹೇಳಿದ್ದಾರೆ.
“ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು,” ಎಂದು ಟೀಕಿಸಿದ್ದಾರೆ.
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
3/4— H D Kumaraswamy (@hd_kumaraswamy) September 29, 2020
ತೇಜಸ್ವಿ ಅವರ ಹೇಳಿಕೆಯನ್ನು ಅಪ್ರಬುದ್ದ ಹೇಳಿಕೆ ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಯಡಿಯೂರಪ್ಪನವರು ತೇಜಸ್ವಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಾಗಿದೆ ಸಂಕಟ ಅನುಭವಿಸಿದ್ದಾರೆ. ಈ ಹೇಳಿಕೆ ಬಿಜೆಪಿ ನಾಯಕರಿಗೆ ಮಾಡಿದ ಅಪಮಾನ ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
“ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರ ಅಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.
ತೇಜಸ್ವಿ ಅವರ ಹೇಳಿಕೆಯನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗ ಎಂದು ಹೆಚ್‌ಡಿಕೆ ಆರೋಪಿಸಿದ್ದಾರೆ.








