ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 21 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,571 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,64,546ಕ್ಕೇರಿದೆ.
ಇದುವರೆಗೂ ರಾಜ್ಯದಲ್ಲಿ 1,76,942 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 83,066 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 6,561 ಸೋಂಕಿತರು ಬಿಡುಗಡೆಹೊಂದಿದ್ದಾರೆ. 698 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,948 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,02,770 ತಲುಪಿದೆ. ಒಟ್ಟು 66,602 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,635 ಮಂದಿ ಸಾವನ್ನಪ್ಪಿದ್ದಾರೆ.