ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ 30ರ ಸಂಜೆ ಐದು ಗಂಟೆಗೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 6,128 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 11,8632 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 46,694 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,233 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 53,324 ತಲುಪಿದೆ. ಒಟ್ಟು 1,912 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,009 ಮಂದಿ ಮರಣಹೊಂದಿದ್ದಾರೆ.
ರಾಜ್ಯದಲ್ಲಿ ಸಕ್ರಿಯವಾಗಿರುವ 69,700 ಪ್ರಕರಣಗಳಲ್ಲಿ, ಆರೋಗ್ಯ ಸ್ಥಿತಿ ಗಂಭೀರವಾಗಿರುವ 620 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 83 ಮಂದಿ ಇಂದು ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. ರಾಜ್ಯದಲ್ಲಿ ಇದುವರೆಗೂ ಕರೋನಾ ಸೋಂಕಿನಿಂದಾಗಿ 2,230 ಮಂದಿ ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 38,095 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದುವರೆಗೂ 13,13,856 ಮಾದರಿಗಳನ್ನು ರಾಜ್ಯದೆಲ್ಲೆಡೆ ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ
ಕಳೆದ 24 ತಾಸುಗಳಲ್ಲಿ 52,123 ಹೊಸ ಕರೋನಾ ಪ್ರಕರಣಗಳು ದೇಶದಲ್ಲಿ ಕಂಡುಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 15,83,792 ತಲುಪಿದೆ. ಇದುವರೆಗೂ 10,20,582 ಮಂದಿ ಕರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 5,28,242 ಸಕ್ರಿಯ ಕರೋನಾ ಪ್ರಕರಣಗಳಿವೆ. ಒಟ್ಟು ಮೃತಪಟ್ಟವರ ಸಂಖ್ಯೆ 34,968 ತಲುಪಿದೆ.
