• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ 3000 ದಾಟಿದ ಕರೋನಾ ಸೋಂಕಿತರ ಸಂಖ್ಯೆ

by
April 4, 2020
in ದೇಶ
0
ಭಾರತದಲ್ಲಿ 3000 ದಾಟಿದ ಕರೋನಾ ಸೋಂಕಿತರ ಸಂಖ್ಯೆ
Share on WhatsAppShare on FacebookShare on Telegram

ಜಗತ್ತಿನಲ್ಲಿ ಕರೋನಾ ಸೋಂಕು ಪೀಡಿತರ ಸಂಖ್ಯೆ ಹತ್ತುಲಕ್ಷ ದಾಟಿದ್ದು,ಸಾವಿನ ಸಂಖ್ಯೆ 50,000 ಮುಟ್ಟಿದೆ. ಭಾರತದಲ್ಲಿ ಒಟ್ಟು 3072 ಕೊರೊನ ಸೋಂಕಿಗೆ ಪೀಡಿತರಾಗಿರುವ ಕುರಿತು ವರದಿಯಾಗಿದ್ದು, ಸಾವಿನ ಸಂಖ್ಯೆ 75 ಕ್ಕೆ ಬಂದು ನಿಂತಿದೆ.

ADVERTISEMENT

ಕೇರಳದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ 306 ಕ್ಕೆ ಏರಿದ್ದು, ಇವತ್ತು ಹನ್ನೊಂದು ಮಂದಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಒಟ್ಟು ದಾಖಲಾದ ಪ್ರಕರಣಗಳಲ್ಲಿ 254 ಪ್ರಕರಣಗಳು ಕ್ರಿಯಾಶೀಲವಾಗಿದ್ದು, 50 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಶುಕ್ರವಾರದಂದು ಮುಂಬೈ ನಗರದಲ್ಲಿ 52 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (BMC) ಹೇಳಿದೆ. ಮಾಯಾನಗರಿ ಮುಂಬೈಯಲ್ಲಿ ಕರೋನಾ ಪೀಡಿತರ ಸಂಖ್ಯೆ 330 ಕ್ಕೆ ಏರಿದ್ದು, ರೋಗಕ್ಕೆ ಬಲಿಯಾದವರ ಸಂಖ್ಯೆ 22ಕ್ಕೆ ತಲುಪಿದೆ ಎಂದು BMC ಶುಕ್ರವಾರದಂದು ಸಂಜೆ ತಿಳಿಸಿದೆ.

ಪಂಜಾಬಿನಲ್ಲಿ ಎಂಟು ಹೊಸ ಪ್ರಕರಣಗಳು ದಾಖಲಾಗಿದ್ದು, ಕರೋನಾ ಸೋಂಕು ಪೀಡಿತರ ಸಂಖ್ಯೆ 65ಕ್ಕೆ ಏರಿದೆಯೆಂದು ಅಧಿಕಾರಿಗಳು ತಿಳಿಸದ್ದಾರೆ.

ಕರ್ನಾಟಕದಲ್ಲಿ ಇಂದು ಹದಿನಾರು ಹೊಸ ಪ್ರಕರಣಗಳು ದಾಖಲಾಗಿದ್ದು ಒಟ್ಟು ಸೋಂಕು ಧೃಢಪಟ್ಟವರ ಸಂಖ್ಯೆ 144 ತಲುಪಿದೆ. ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಸೋಂಕು ಹರಡಿದ್ದು, ಮೈಸೂರಿನಲ್ಲಿ 7, ಬೆಂಗಳೂರಿನಲ್ಲಿ 4, ಮಂಗಳೂರಿನಲ್ಲಿ 3, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೆ ನಾಲ್ಕು ಮಂದಿ ರೋಗಿಗಳು ಸೋಂಕಿನಿಂದ ಮೃತಪಟ್ಟಿದ್ದು, ಹನ್ನೊಂದು ಮಂದಿ ಸೋಂಕು ಪೀಡಿತರು ಗುಣಮುಖರಾಗಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 94 ಮಂದಿಯನ್ನು ಸೋಂಕು ಶಂಕೆಯ ಹಿನ್ನಲೆಯಲ್ಲಿ ದಾಖಲಿಸಿಕೊಳ್ಳಲಾಗಿದೆ‌. 1232 ಮಂದಿಯನ್ನು ಕ್ವಾರಂಟೈನ್ ಕೇಂದ್ರದಲ್ಲಿ ಹಾಗೂ 1752 ಮಂದಿಯನ್ನು ಮನೆಗಳಲ್ಲಿಯೇ ಸಂಪರ್ಕ ತಡೆಯಲ್ಲಿರಿಸಲಾಗಿದೆ. ರಕ್ತ ಹಾಗೂ ಗಂಟಲಿನ ದ್ರವದ ಪರೀಕ್ಷೆಗೆ 400 ಮಂದಿಯ ಮಾದರಿಯನ್ನು ಸಂಗ್ರಹಿಸಲಾಗಿದ್ದು,129 ರೋಗಿಗಳಿಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

‘ದೆಹಲಿಯಲ್ಲಿ ಧಾರ್ಮಿಕ ಸಮಾವೇಶಕ್ಕೆ ಹೋಗಿ ಬಂದವರಲ್ಲಿ ಈಗಾಗಲೇ 16 ಮಂದಿಗೆ ಸೋಂಕು ಧೃಡಪಟ್ಟಿದೆ. ರಾಜ್ಯದಲ್ಲಿ ಈಗಾಗಲೇ ನಾಲ್ವರು ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದು, ಹನ್ನೊಂದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ’ ಎಂದು ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Tags: Corona VIrus Updateಕರೋನಾ
Previous Post

‘ಶಾಸ್ತ್ರ ಹೇಳೋಕೆ, ಬದನೇಕಾಯಿ ತಿನ್ನೋಕೆ’ ಎನ್ನುವಂತಿದೆ ‘ಕೆಪಿಸಿಸಿ ಕರೋನಾ ವಿಪತ್ತು ಪರಿಹಾರ ನಿಧಿ‘

Next Post

ಅಲ್ಲಾಹನೇ ಬಂದು ಗುಣಪಡಿಸುತ್ತಾನೆ ಅನ್ನೋ ಭ್ರಮೆಯಲ್ಲಿದೆಯೇ ʼಮುಸ್ಲಿಂ ಸಮುದಾಯʼ!?

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಅಲ್ಲಾಹನೇ ಬಂದು ಗುಣಪಡಿಸುತ್ತಾನೆ ಅನ್ನೋ ಭ್ರಮೆಯಲ್ಲಿದೆಯೇ ʼಮುಸ್ಲಿಂ ಸಮುದಾಯʼ!?

ಅಲ್ಲಾಹನೇ ಬಂದು ಗುಣಪಡಿಸುತ್ತಾನೆ ಅನ್ನೋ ಭ್ರಮೆಯಲ್ಲಿದೆಯೇ ʼಮುಸ್ಲಿಂ ಸಮುದಾಯʼ!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada