• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತವೇನು ಕೇವಲ ಹಿಂದೀವಾಲಾಗಳ ದೇಶವೇ? -ಟಿ ಎ ನಾರಾಯಣ ಗೌಡ ಪ್ರಶ್ನೆ

by
November 1, 2020
in ಕರ್ನಾಟಕ
0
ಭಾರತವೇನು ಕೇವಲ ಹಿಂದೀವಾಲಾಗಳ ದೇಶವೇ? -ಟಿ ಎ ನಾರಾಯಣ ಗೌಡ ಪ್ರಶ್ನೆ
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಹೇಳಿದ್ದಾರೆ.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ಕಛೇರಿ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡಿದ ನಾರಾಯಣ ಗೌಡ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ? ಯಾಕೆ ಅವರು ಕರ್ನಾಟಕದ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಜಿಎಸ್ ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ‌ ಬೇಡುವ ಸ್ಥಿತಿ ತಲುಪಿದೆ. ನಾವು ಯಾರ ಹಣವನ್ನು ಕೇಳುತ್ತಿದ್ದೇವೆ? ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಯ ಪಡುತ್ತಿದ್ದಾರೆ. ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ತ್ವಗಳು‌ ಉಳಿದುಕೊಂಡಿವೆಯೇ? ಎಂದು ಕೇಳಿದ್ದಾರೆ.

ರಾಜ್ಯೋತ್ಸವವನ್ನು ಸಂಘಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ‌ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು‌ ಕರೆಯಿಸಿ ರ‌್ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ? ಕರೋನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು‌ ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ‌ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ ಎಂದು ಸರ್ಕಾರವನ್ನು ಟೀಕಿಸಿದ್ದಾರೆ.

ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ ಎಂದು ಕರೆ ನೀಡಿದ ನಾರಾಯಣ ಗೌಡ, ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ‌ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ‌ ಆಟ ಹೆಚ್ಚು‌ ದಿನ‌ ನಡೆಯದು. ಕನ್ನಡಿಗರು ಜಾಗ್ರತರಾಗಿದ್ದಾರೆ ಎಂದು ಎಚ್ಚರಿಸಿದ್ದಾರೆ.

Tags: ಟಿಎ ನಾರಾಯಣಗೌಡ
Previous Post

ಒಕ್ಕಲಿಗ ನಾಯಕತ್ವನ್ನು ನಿರ್ಧರಿಸಲಿದೆಯೇ ಆರ್‌ ಆರ್‌ ನಗರ ಉಪಚುನಾವಣೆ?

Next Post

ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ

ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!