ಕೆಪಿಸಿಸಿ ಅಧ್ಯಕ್ಷ ಸ್ಥಾನ, ಸಿಎಂ ಬದಲಾವಣೆ, ಅಧಿಕಾರ ಹಂಚಿಕೆ, ವಿಚಾರಗಳ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun kharge) ಎಚ್ಚರಿಕೆ ನೀಡಿದ ಹಿನ್ನೆಲೆ, ಈ ಬಗ್ಗೆ ಬೆಂಗಳೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ಮಾತನಾಡಿದ್ದಾರೆ.
ಎಐಸಿಸಿ ವರಿಷ್ಠ ಮಲ್ಲಿಕಾರ್ಜುನ ಖರ್ಗೆಯವರ ಮಾತು ಸರಿಯಾಗಿಯೇ ಇದೆ.ಅವರು ಹೇಳಿರೋದು ನೂರಕ್ಕೆ ನೂರು ಸರಿಯಾಗಿದೆ.ಎಲ್ಲರೂ ಅವರ ಮಾತನ್ನ ಪರಿಪಾಲನೆ ಮಾಡಬೇಕಿದೆ,ಶಿಸ್ತಿನಿಂದ ಪಕ್ಷವನ್ನು ಸಂಘಟನೆ ಮಾಡಬೇಕು ಎಂದು ಮಹದೇವಪ್ಪ ಹೇಳಿದ್ದಾರೆ.ಕಾಂಗ್ರೆಸ್ ನಾಯಕರೆಲ್ಲರೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷರ ಖಡಕ್ ಎಚ್ಚರಿಕೆ ಹಿನ್ನೆಲೆರಾಜ್ಯ ಸಚಿವರು ಮತ್ತು ಶಾಸಕರು ಫುಲ್ ಸೈಲೆಂಟ್ ಆಗಿದ್ದಾರೆ. ಕೆಪಿಸಿಸಿ ಸ್ಥಾನದ ಬಗ್ಗೆ ಸಚಿವರುಗಳೇ ಬಹಿರಂಗ ಹೇಳಿಕೆಗಳನ್ನು ನೀಡಿದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೋಲಾಹಲ ಎಬ್ಬಿಸಿತ್ತು.
ಆದ್ರೆ ಈಗ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್ ಹಿನ್ನಲೆಯಲ್ಲಿ ಇದೀಗ ಸಿಎಂ ಬದಲಾವಣೆ, ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಮಾತನ್ನಾಡಲು, ಯಾವುದೇ ಹೇಳಿಕೆಗಳನ್ನು ನೀಡಲು ಸಚಿವರು, ಶಾಸಕರು ಹಿಂದೇಟು ಹಾಕುತ್ತಿದ್ದಾರೆ.