ರಾಜ್ಯಾದ್ಯಂತ ಮಸೀದಿಗಳಲ್ಲಿ ಬಳಸುವ ಧ್ವನಿವರ್ಧಕಗಳನ್ನು ನಿಷೇಧಿಸಿ ಡಿಜಿ ಮತ್ತು ಐಜಿಪಿ ಕಚೇರಿಯಿಂದ ಆದೇಶ ಹೊರಡಿಸಿದ್ದಾರೆನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದುದು, ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು.
ಈ ಕುರಿತು ಸ್ಪಷ್ಟೀಕರಣ ನೀಡಿರುವ ಪೊಲೀಸ್ ಇಲಾಖೆ, ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ತೆರವುಗೊಳಿಸುವಂತೆ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆ ನೀಡಿಲ್ಲ ಎಂದು ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಹಿರಿಯ ಅಧಿಕಾರಿಗಳ ಒಪ್ಪಿಗೆಯಿಲ್ಲದೆ ಗುಮಾಸ್ತರು ಕಿಡಿಗೇಡಿತನದಿಂದ ಕರ್ನಾಟಕ ರಾಜ್ಯದ ಪೊಲೀಸ್ ಕಮಿಷನರಗಳು ಹಾಗೂ ಜಿಲ್ಲಾ ಎಸ್ಪಿಗಳಿಗೆ ಕಳುಹಿಸಿದ್ದಾರೆ. ಆದರೆ ಈ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ತೆಗೆಯುವಂತ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆಯಿಂದ ನೀಡಿರುವುದಿಲ್ಲ ಎಂದು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ಫ್ಯಾಕ್ಟ್ ಚೆಕ್ ವೆಬ್ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಬಗ್ಗೆ ಮುಂದಿನ ವಿಚಾರಣೆಗೆ ಆದೇಶಿಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಹಾಗೂ ಸಾರ್ವಜನಿಕರು ಇಂತಹ ಗಾಳಿಸುದ್ದಿ ಅಥವಾ ಹಾದಿ ತಪ್ಪಿಸುವಂತಹ ಸುದ್ದಿಗಳಿಗೆ ಗಮನ ಹರಿಸದಂತೆ ಸೂಚಿಸಿದೆ.
ಇದೊಂದು ಆಂತರಿಕ ಪತ್ರವಾಗಿದ್ದು, ರಾಜ್ಯದ ಎಲ್ಲ ಆಯುಕ್ತರು ಮತ್ತು ಎಸ್ಪಿಗಳಿಗೆ ಕಳುಹಿಸಲಾಗಿದೆ. ಮಸೀದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ಪೀಕರ್ಗಳನ್ನು ತೆಗೆದುಹಾಕುವಂತೆ ಕೋರಿ ಹರ್ಷ ಮುತಾಲಿಕ್ ದೂರು ಬರೆದಿದ್ದರು. ಮಸೀದಿಗಳಲ್ಲಿ ಧ್ವನಿವರ್ಧಕಗಳು ವಿಪರೀತ ಶಬ್ದವನ್ನು ಸೃಷ್ಟಿಸುತ್ತಿದ್ದರೆ ಮಾತ್ರ (ಅಂದರೆ ಕಾನೂನು ಡೆಸಿಬಲ್ ಮಟ್ಟವನ್ನು ಮೀರಿ) ಕ್ರಮ ತೆಗೆದುಕೊಳ್ಳುವಂತೆ ಆದೇಶ ಹೊರಡಿಸಿದ್ದು, ಇಲ್ಲದಿದ್ದರೆ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ಐಜಿ ಠಾಣೆಯ ಮೂಲಗಳು ಪ್ರತಿಧ್ವನಿಗೆ ತಿಳಿಸಿದೆ.