ಮಹಾದಾಯಿ ನದಿ ವಿವಾದ ನ್ಯಾಯಮಂಡಳಿಯ ಆದೇಶದ ಪ್ರಕಾರ ಕರ್ನಾಟಕ ಸರ್ಕಾರವು ಮಹಾದಾಯಿ ಯೋಜನೆಯ ಅನುಷ್ಠಾನಕ್ಕೆ ಮುಂದಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕವು ಮಹದಾಯಿ ನದಿ ನೀರನ್ನು ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂಬ ಆರೋಪದ ಮೇಲೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಇದನ್ನು ಸ್ವತಃ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದು, ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಆರೋಪಿಸಿದ್ದರು.
ನ್ಯಾಯಮಂಡಳಿ ತನ್ನ ಆದೇಶವನ್ನು ನೀಡಿದೆ ಮತ್ತು ಅದರಂತೆ ಕರ್ನಾಟಕ ಸರ್ಕಾರ ಈ ಕಾಮಗಾರಿಗಾಗಿ 500 ಕೋಟಿ ರೂಪಾಯಿಯನ್ನೂ ಮೀಸಲಿಟ್ಟಿದೆ. ಕೇಂದ್ರಕ್ಕೆ ಅರಣ್ಯ ತೆರವುಗೊಳಿಸಲು ರಾಜ್ಯ ಸರ್ಕಾರ ಅರ್ಜಿಯನ್ನೂ ಸಲ್ಲಿಸಿದೆ ಎಂದು ಜೋಶಿ ತಿಳಿಸಿದ್ದಾರೆ.
ಅದೇ ವೇಳೆ, ಗೋವಾ ಸರ್ಕಾರ ಯಾವ ಆಧಾರದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ ಎಂದು ನನಗೆ ಅರ್ಥವಾಗಿಲ್ಲ ಎಂದ ಪ್ರಹ್ಲಾದ್ ಜೋಶಿ ನಾವು ಕಾಮಗಾರಿಯನ್ನು ಮುಂದುವರೆಸುತ್ತೇವೆ ಎಂದಿದ್ದಾರೆ.
ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಮಾಡಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿರುವುದಾಗಿ ಗೋವಾ ಸರ್ಕಾರ ಹೇಳಿತ್ತು. ಕರ್ನಾಟಕದ ವಿರುದ್ಧ ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವ ಆರೋಪ ಮಾಡಿರುವ ಗೋವಾ ಸರ್ಕಾರ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದೆ. ಎರಡು ದಿನಗಳಲ್ಲಿ ಸುಪ್ರೀಂಕೋರ್ಟ್ ಗೆ ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿಕೆ ನೀಡಿದ್ದಾರೆ.