ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆದಿತ್ಯವಾರ ರಾತ್ರಿ ಸುಮಾರು ಎಂಟು ಮುಕ್ಕಾಲು ಹೊತ್ತಿಗೆ AIIMS ಆಸ್ಪತ್ರೆಗೆ ದಾಖಲಾಗಿದ್ದರು. ಅಸೌಖ್ಯ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್‌ಗೆ ಚಿಕಿತ್ಸೆ ನೀಡುತ್ತಿದ್ದ AIIMS ಆಸ್ಪತ್ರೆ ವೈದ್ಯರು ಮಾಜಿ ಪ್ರಧಾನಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದರು.
ಚಿಕಿತ್ಸೆಗೆ ಶೀಘ್ರವಾಗಿ ಸ್ಪಂದಿಸಿದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಮಂಗಳವಾರದಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇವರು ಕೋವಿಡ್-19 ವಿರುದ್ದದ ಹೋರಾಟದ ಸಮಯದಲ್ಲಿ ಸರ್ಕಾರಕ್ಕೆ ಕಾಲಕಾಲಕ್ಕೆ ಅಗತ್ಯವಾದಂತಹ ಮಾಹಿತಿಗಳನ್ನು ನೀಡುತ್ತಿದ್ದರು. ಇವರಿಗೆ ಈ ಹಿಂದೆಯೂ ಹಲವು ಬಾರಿ ಬೈಪಾಸ್ ಸರ್ಜರಿ ಆಗಿದ್ದು, 2009ರಲ್ಲಿ ಕೊನೇಯ ಬಾರಿ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು.
Also Read: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್‌ಗೆ ದಾಖಲು