ಮುಖ್ಯಮಂತ್ರಿಗೆ ಜನರ ಕಷ್ಟಕ್ಕೆ ಸ್ಪಂದಿಸಲಾಗದಷ್ಟು ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲೇ ಆರಾಮವಾಗಿರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳು ನೆರೆ ಹಾವಳಿಯಿಂದ ನಲುಗಿ ಹೋಗಿವೆ. ಜನರು ಆಸ್ತಿ ಪಾಸ್ತಿ ಕಳೆದುಕೊಂಡು ಜೀವ ಉಳಿದರೆ ಸಾಕು ಎನ್ನುವಂತಹ ಸ್ಥಿತಿಗೆ ತಲುಪಿದ್ದಾರೆ. ನೊಂದ ಜನರಿಗೆ ಸಾಂತ್ವನ ಹೇಳಬೇಕಿದ್ದ ಗೋವಿಂದ ಕಾರಜೋಳ ಹಾಗೂ ಇತರ ಜಿಲ್ಲೆಗಳ ಉಸ್ತುವಾರಿ ಸಚಿವರು ಎಲ್ಲಿದ್ದಾರೆ? ಇವರಿಗೆ ಜನರ ಪ್ರಾಣಕ್ಕಿಂತ ಚುನಾವಣೆ ಮುಖ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಆಗಸ್ಟ್ ತಿಂಗಳಲ್ಲಿಯೇ ಮುಖ್ಯಮಂತ್ರಿ ಅವರು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗಬೇಕಿತ್ತು, ಆದರೆ ವಯಸ್ಸಾಗಿದೆ ಜೊತೆಗೆ ಕರೋನಾ ಸೋಂಕು ತೀವ್ರವಾಗಿದೆ ಅಂತ ನೆಪ ಹೇಳಿ ಹೋಗಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸಲಾಗದಷ್ಟು ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲೇ ಆರಾಮವಾಗಿರಲಿ ಎಂದು ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಕುಟುಕಿದ್ದಾರೆ.
ಆಗಸ್ಟ್ ತಿಂಗಳಲ್ಲಿಯೇ ಮುಖ್ಯಮಂತ್ರಿ @BSYBJP ಅವರು ಪ್ರವಾಹಪೀಡಿತ ಪ್ರದೇಶಗಳಿಗೆ ಹೋಗಬೇಕಿತ್ತು, ಆದರೆ ವಯಸ್ಸಾಗಿದೆ ಜೊತೆಗೆ ಕೊರೊನಾ ಸೋಂಕು ತೀವ್ರವಾಗಿದೆ ಅಂತ ನೆಪ ಹೇಳಿ ಹೋಗಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸಲಾಗದಷ್ಟು ವಯಸ್ಸಾಗಿದ್ದರೆ ರಾಜೀನಾಮೆ ಕೊಟ್ಟು ಮನೆಯಲ್ಲೇ ಆರಾಮವಾಗಿರಲಿ. 2/5#Pressmeet
— Siddaramaiah (@siddaramaiah) October 17, 2020
ಶಿರಾದಲ್ಲಿ ಬಿಜೆಪಿಯವರು ಸಾವಿರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿರುವುದು ಕೋವಿಡ್ ನಿಯಮಗಳಿಗೆ ವಿರುದ್ಧವಲ್ಲವೇ? ತಾವು ಜಾರಿಗೆ ತಂದಿರುವ ನಿಯಮಗಳನ್ನು ತಾವೇ ಧಿಕ್ಕರಿಸಿದ್ದಾರೆ, ಇನ್ನು ಬೇರೆಯವರಿಗೆ ಉಪದೇಶ ನೀಡಲು ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ, ಆರೋಗ್ಯ ಸಚಿವರು ಆಗಾಗ ತಮ್ಮ ಪಕ್ಷದ ಸಭೆ ಸಮಾರಂಭಗಳನ್ನೂ ಗಮನಿಸಲಿ ಎಂದು ಸುಧಾಕರ್ ಅವರ ಕಾಲೆಳೆದಿದ್ದಾರೆ.
ಕುಸುಮಾ ಅವರು ನಾಮಪತ್ರ ಸಲ್ಲಿಸುವ ದಿನ ನಾನು 11.45 ಕ್ಕೆ ನಾಮಪತ್ರ ಸ್ವೀಕರಿಸುವ ಕಚೇರಿಗೆ ಹೋಗಿದ್ದು, ನನ್ನ ವಿರುದ್ಧ 11.15 ಕ್ಕೆ ಕೇಸ್ ದಾಖಲಿಸಲಾಗಿದೆ. ಇದು ಪೊಲೀಸ್ ಇಲಾಖೆಯ ದುರ್ಬಳಕೆಯಲ್ಲದೆ ಇನ್ನೇನು? ಇದು ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದ ಆರೋಪ. ಇಂಥಾ ಗೊಡ್ಡು ಬೆದರಿಕೆಗಳಿಗೆಲ್ಲ ನಾವು ಹೆದರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕುಸುಮಾ ಅವರು ನಾಮಪತ್ರ ಸಲ್ಲಿಸುವ ದಿನ ನಾನು 11.45 ಕ್ಕೆ ನಾಮಪತ್ರ ಸ್ವೀಕರಿಸುವ ಕಚೇರಿಗೆ ಹೋಗಿದ್ದು, ನನ್ನ ವಿರುದ್ಧ 11.15 ಕ್ಕೆ ಕೇಸ್ ದಾಖಲಿಸಲಾಗಿದೆ. ಇದು ಪೊಲೀಸ್ ಇಲಾಖೆಯ ದುರ್ಬಳಕೆಯಲ್ಲದೆ ಇನ್ನೇನು?
ಇದು ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದ ಆರೋಪ. ಇಂಥಾ ಗೊಡ್ಡು ಬೆದರಿಕೆಗಳಿಗೆಲ್ಲ ನಾವು ಹೆದರಲ್ಲ. 4/5#pressmeet— Siddaramaiah (@siddaramaiah) October 17, 2020
ಬಡವರು, ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿ ಅಂತ ನಾನು ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಿಜೆಪಿ ಸರ್ಕಾರ ಮುಚ್ಚಲು ಹೊರಟಿದೆ. ದುಡ್ಡಿಲ್ಲ, ಕರೋನಾ ಇದೆ ಅಂತ ಜನರ ಎದುರು ಅಸಹಾಯಕತೆ ತೋರುವ ಬದಲು ಅಧಿಕಾರ ಬಿಟ್ಟು ತೊಲಗಲಿ. ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಎಂದು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಸ್ಥಗಿತಗೊಳಿಸುವುದನ್ನು ವಿರೋಧಿಸಿದ್ದಾರೆ.