ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕರೋನಾ ಸೋಂಕು ಪಾಸಿಟಿವ್ ಇರುವುದು ಪತ್ತೆಯಾಗಿದೆ. ಈ ವಿಚಾರವನ್ನು ಸ್ವತಃ ಮುಖ್ಯಂಮತ್ರಿಯೇ ತನ್ನ ಟ್ವಿಟರ್ ಖಾತೆಯ ಮೂಲಕ ಹೇಳಿಕೊಂಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020







