• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮುಖ್ಯಮಂತ್ರಿ ರೇಸ್‌ನಲ್ಲಿ ನಳಿನ್‌ ಕುಮಾರ್‌ ಕಟೀಲ್?

by
November 21, 2020
in ಕರ್ನಾಟಕ
0
ಮುಖ್ಯಮಂತ್ರಿ ರೇಸ್‌ನಲ್ಲಿ ನಳಿನ್‌ ಕುಮಾರ್‌ ಕಟೀಲ್?
Share on WhatsAppShare on FacebookShare on Telegram

ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದವರು ಸಿಎಂ ಬಿಎಸ್‌ ಯಡಿಯೂರಪ್ಪ. ಬಲಪಂಥೀಯ ನಿಲುವು ಹೊಂದಿರುವ ಬಿಜೆಪಿ ಪಕ್ಷದಲ್ಲಿದ್ದರೂ ಹಸಿರು ಶಾಲು ಹೊದ್ದುಕೊಂಡೇ ಪಕ್ಷ ಸಂಘಟಿಸಿದ ಯಡಿಯೂರಪ್ಪ ಅವರೀಗ ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ. ಮೂರು ದಶಕಗಳ ಕಾಲ ವಿರೋಧ ಪಕ್ಷದ ಸ್ಥಾನದಲ್ಲೇ ಇದ್ದು ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಹಾನ್‌ ನಾಯಕ ಯಡಿಯೂರಪ್ಪ ಅವರು ಸಿಎಂ ಪದವಿ ಕಳೆದುಕೊಳ್ಳುವ‌ ಕಾಲ ಸನ್ನಿಹಿತವಾಗುತ್ತಿದೆ ಎನ್ನುತ್ತಿವೆ ಮೂಲಗಳು.

ADVERTISEMENT

ಬಲ್ಲ ಮೂಲಗಳ ಪ್ರಕಾರ ಒಂದು ವೇಳೆ ಈಗಲೇ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದ್ದೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜ್ಯದ ಸಿಎಂ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಡಿಸಿಎಂ ಲಕ್ಷ್ಮಣ ಸವದಿ, ಡಿ.ವಿ ಸದಾನಂದಗೌಡ, ಉಮೇಶ್‌ ಕತ್ತಿ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ಸೇರಿದಂತೆ ಇನ್ನು ಹಲವು ಬಿಜೆಪಿ ಹಿರಿಯ ನಾಯಕರು ಸಿಎಂ ಆಗುವ ರೇಸ್‌ನಲ್ಲಿದ್ದರೂ ಹೈಕಮಾಂಡ್‌ ಒಲವು ಮಾತ್ರ ಕಟೀಲ್‌ ಪರ ಇದೆ ಎಂದೇ ಹೇಳಲಾಗುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಹೈಕಮಾಂಡ್‌ ಜೆ.ಪಿ. ನಡ್ಡಾ ಅಥವಾ ಬಿ.ಎಲ್.‌ ಸಂತೋಷ್ ಅವರ ಒಲವು ಕಟೀಲ್‌ ಪರವಿದ್ದರೂ ಯಡಿಯೂರಪ್ಪರನ್ನು ‌ಕೆಳಗಿಳಿಸಿದ ಬಳಿಕ ಯಾರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎನ್ನುವ ಅಂತಿಮ ನಿರ್ಧಾರ ತೆಗೆದುಕೊಳ್ಳುವರು ಮಾತ್ರ ಅಮಿತ್‌ ಶಾ. ಒಂದು ವೇಳೆ ತಮ್ಮನ್ನು ಸಿಎಂ ಸ್ಥಾನದಿಂದ ಕೆಳಗಿಸುವುದಾದರೇ ತಾವು ಹೇಳಿದವರನ್ನೇ ಮುಖ್ಯಮಂತ್ರಿ ಮಾಡಬೇಕೆಂಬುದು ಯಡಿಯೂರಪ್ಪರ ಒತ್ತಾಯ. ಇದಕ್ಕೆ ಒಪ್ಪಿರುವ ಅಮಿತ್‌ ಶಾ ಬಿಎಸ್‌ವೈ ಪುತ್ರ ವಿಜಯೇಂದ್ರ ಅಥವಾ ಒಕ್ಕಲಿಗರ ನಾಯಕ ಆರ್‌ ಅಶೋಕ್‌ ಅವರಿಗೆ ಯಡಿಯೂರಪ್ಪ ಸೂಚನೆ ಮೇರೆಗೆ ಅಮಿತ್‌ ಶಾ ಸಿಎಂ ಸ್ಥಾನ ನೀಡಬಹುದು ಎನ್ನಲಾಗುತ್ತಿದೆ.

ಅಮಿತ್ ಶಾ ಅಚ್ಚರಿಯ ಅಭ್ಯರ್ಥಿ ನೀಡುವುದರಲ್ಲಿ ನಿಷ್ಣಾತರು. ಹಾಗಾಗಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬುದು ಸರ್ಪ್ರೈಸ್ ಆಗಬಹುದು. ಇಲ್ಲದೇ ಹೋದಲ್ಲಿ ಬಿಎಸ್‌ವೈ ಮಾತು ನಿರ್ಲಕ್ಷಿಸಿ ನಳಿನ್‌ ಕುಮಾರ್‌ ಕಟೀಲ್‌ ಅವರನ್ನೇ ಸಿಎಂ ಮಾಡಬಹುದು.

ಸಿಎಂ ಬದಲಾವಣೆಯ ಭಯ ಯಡಿಯೂರಪ್ಪ ಅವರನ್ನೂ ಬಲವಾಗಿ ಕಾಡುತ್ತಿದೆ.‌ ಬಿಜೆಪಿ ಅಧಿಕಾರಕ್ಕೆ ಬರಲು ತಮ್ಮನ್ನು ನಂಬಿ ಮಂತ್ರಿ ಸ್ಥಾನ ಬಿಟ್ಟು ಬಂದ ಆರ್. ಶಂಕರ್, ಎಂಟಿಬಿ ನಾಗರಾಜ್‌ಗೂ ಮಂತ್ರಿ ಸ್ಥಾನ ಕೊಡಬೇಕಿದೆ. ಅದೇ ರೀತಿ ಬಹಳ ಸಲ ಭರವಸೆ ಕೊಟ್ಟಿರುವ ಕಾರಣಕ್ಕೆ ಉಮೇಶ್ ಕತ್ತಿಯನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಬೇಕಿದೆ. ಹಾಗಾಗಿ ಯಾರಿಗೆ ಕೊಡಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲ ಯಡಿಯೂರಪ್ಪ ಅವರಿಗೆ. ಹೀಗೆ ಗೊಂದಲದ ಸುಳಿಯಲ್ಲಿ ಸಿಲುಕಿರುವ ಯಡಿಯೂರಪ್ಪ ಎಷ್ಟು ನಾಜೂಕಾಗಿ ಸಂಪುಟ ಸರ್ಜರಿ ಮಾಡುತ್ತಾರೆ ಎನ್ನುವುದರ ಮೇಲೆ ಅವರು ಇನ್ನು ಎಷ್ಟು ದಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಮುಂದುವರೆಯುತ್ತಾರೆ ಎಂಬುದು ನಿರ್ಧಾರವಾಗಲಿದೆ.

ನಾಯಕತ್ವ ಬದಲಾವಣೆಗಾಗಿ ಈಗಾಗಲೇ ಹೈಕಮಾಂಡಿಗೆ ಯಡಿಯೂರಪ್ಪ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಅದು ಬಹುತೇಕ ಗೊತ್ತಿರುವ ವಿಷಯ, ‘ಯಡಿಯೂರಪ್ಪ ಅವರಿಗೆ ವಯಸ್ಸಾಯಿತು, ಅವರ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಅತಿಯಾಯಿತು’ ಎಂದು ಚಾರ್ಜ್‌ ಶೀಟ್‌ನಲ್ಲಿ ದೂರಲಾಗಿದೆ. ಹಾಗಾಗಿ ಯಾವುದೇ ಸಂದರ್ಭದಲ್ಲೂ ಬೇಕಾದರೂ ಹೈಕಮಾಂಡ್‌ ಸಿಎಂ ಬದಲಾವಣೆ ಮಾಡಬಹುದು.

ಯಡಿಯೂರಪ್ಪನವರ ಉತ್ತರಾಧಿಕಾರಿ ಯಾರಾಗುತ್ತಾರೆ? ಅದು ಯಾವಾಗ ಘಟಿಸುತ್ತದೆ ಎಂಬ ಮಾಹಿತಿ ಸದ್ಯಕ್ಕಿಲ್ಲವಾದರೂ ಕಟೀಲ್‌ ಮುಖ್ಯಮಂತ್ರಿ ಕುರ್ಚಿಯ ಕನಸು ಕಾಣುತ್ತಿರುವುದು ಮಾತ್ರ ಸತ್ಯ.

Tags: ನಳಿನ್ ಕುಮಾರ್ ಕಟೀಲ್ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
Previous Post

ಗೋಹತ್ಯೆ ಹಾಗೂ ಲವ್ ಜಿಹಾದ್ ನಿಷೇಧಕ್ಕೆ ಕಾನೂನು ರೂಪಿಸಲಿರುವ ಕರ್ನಾಟಕ ಸರ್ಕಾರ

Next Post

ಪಶ್ಚಿಮ ಬಂಗಾಳ; ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜತೆ ದೀದಿ ಮೈತ್ರಿ ಸಾಧ್ಯತೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಪಶ್ಚಿಮ ಬಂಗಾಳ; ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜತೆ ದೀದಿ ಮೈತ್ರಿ ಸಾಧ್ಯತೆ

ಪಶ್ಚಿಮ ಬಂಗಾಳ; ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಜತೆ ದೀದಿ ಮೈತ್ರಿ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada