ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಪಟ್ಟು ಹಿಡಿದು ನಾಲ್ಕು ದಿನ ಮುಷ್ಕರ ನಡೆಸಿದ್ದ BMTC ಹಾಗೂ KSRTC ನೌಕರರಲ್ಲಿ 200 ಜನರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಸಂಬಂಧ BMTC ಪತ್ರಿಕಾ ಪ್ರಕಟಣೆ ನೀಡಿದ್ದು, ಈ ಸುದ್ದಿ ಸುಳ್ಳು ಎಂದು ಸ್ಪಷ್ಟಪಡಿಸಿದೆ.
ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ FIR ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ, ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ. ಸಾರಿಗೆ ಇಲಾಖೆಯಲ್ಲಿ ಮುಷ್ಕರದಲ್ಲಿ ಪಾಲ್ಗೊಂಡ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು ಬೆ.ಮ.ಸಾ.ಸಂಸ್ಥೆ ವ್ಯಾಪ್ತಿಯಲ್ಲಿ ಮುಷ್ಕರದ ಸಮಯದಲ್ಲಿ ಕಾರ್ಯನಿರತ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಒಟ್ಟು 3 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಮಂಡಳಿ/ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು, ಎಂಬುದನ್ನು ಪ್ರಕಟಣೆಯು ಸ್ಪಷ್ಟಪಡಿಸಲಾಗಿದೆ.