• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ- ಸಿದ್ದರಾಮಯ್ಯ

by
November 6, 2020
in ಕರ್ನಾಟಕ
0
ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ- ಸಿದ್ದರಾಮಯ್ಯ
Share on WhatsAppShare on FacebookShare on Telegram

ಲವ್ ಜಿಹಾದ್ ತಡೆಯಲು ಕಾನೂನು ರೂಪಿಸುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ʼಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿ ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ ಎಂದು ಸ್ವತಃ ಕಾನೂನು ಪದವಿಧರರಾಗಿರುವ ಸಿದ್ದರಾಮಯ್ಯ ತಿಳಿಸಿದ್ದಾರೆ.

'ಲವ್ ಜಿಹಾದ್' ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ,
'ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ' ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, @CMofKarnataka ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?
2/4

— Siddaramaiah (@siddaramaiah) November 6, 2020


ADVERTISEMENT

ಮುಖ್ಯಮಂತ್ರಿ ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಅವರು ಹೇಳಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲವ್ ಜಿಹಾದ್, ಅಂತರ್ಜಾತಿ ಪ್ರೇಮ ವಿವಾಹದ ತಡೆಗಟ್ಟಲು ಕಾನೂನು ತರುವುದಾಗಿ ಹೇಳಿದ್ದರು. ಅದರ ಬೆನ್ನಿಗೆ ಸಚಿವ ಸಿಟಿ ರವಿ ಕೂಡಾ ಇಂತಹದ್ದೇ ಕಾನೂನು ಕರ್ನಾಟಕದಲ್ಲೇ ತರುವುದಾಗಿ ಹೇಳಿದ್ದರು

Tags: former chief minister Siddaramaiahlove jihadಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಲವ್ ಜಿಹಾದ್ಸಿದ್ದರಾಮಯ್ಯ
Previous Post

ತಮಿಳುನಾಡು: ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರ ಬಂಧನ

Next Post

ಕರ್ನಾಟಕ: 2960 ಹೊಸ ಕರೋನಾ ಪ್ರಕರಣಗಳು ಪತ್ತೆ

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಕರ್ನಾಟಕ: 2960 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 2960 ಹೊಸ ಕರೋನಾ ಪ್ರಕರಣಗಳು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada