• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜಕೀಯ ಪ್ರವೇಶಿಸಲಿದ್ದಾರೆಯೇ ಗಂಗೂಲಿ – ಮುಂದಿನ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ದೀದಿ ವರ್ಸಸ್‌ ದಾದಾ?

by
December 28, 2020
in ರಾಜಕೀಯ
0
ರಾಜಕೀಯ ಪ್ರವೇಶಿಸಲಿದ್ದಾರೆಯೇ ಗಂಗೂಲಿ - ಮುಂದಿನ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ದೀದಿ ವರ್ಸಸ್‌ ದಾದಾ?
Share on WhatsAppShare on FacebookShare on Telegram

ಟೀಮ್ ಇಂಡಿಯಾ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರ ರಾಜಕೀಯ ಪ್ರವೇಶದ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ADVERTISEMENT

ಭಾನುವಾರ ಸೌರವ್‌ ಗಂಗೂಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್‌ ಅವರನ್ನು ಭೇಟಿಯಾಗಿದ್ದರು. ಜಗದೀಪ್‌ ಧಂಕರ್‌ ಜತೆಗೆ ಸೌರವ್‌ ಗಂಗೂಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ಈಗ ದಾದಾ ರಾಜಕೀಯ ಪ್ರವೇಶಿಸಬಹುದು ಎಂಬ ಪ್ರಶ್ನೆ ಹುಟ್ಟಿಹಾಕಿದೆ.

ಇದು ಕೇವಲ ಸೌಹಾರ್ದಯುತ ಭೇಟಿಯೆಂದು ಹೇಳಲಾಗುತ್ತಿದೆಯಾದರೂ ಸೌರವ್‌ ಗಂಗೂಲಿ ಪಶ್ಚಿಮ ಬಂಗಾಳದ ಮುಂದಿನ ಚುನಾವಣೆ ಬಗ್ಗೆಯೇ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಕೊಲ್ಕತ್ತಾದಲ್ಲಿ ನಡೆದ ಬಿಜೆಪಿ ಸಮಾವೇಶವೊಂದರಲ್ಲಿ “ಬಂಗಾಳದ ಭೂಮಿಪುತ್ರನೇ ಪಶ್ಚಿಮ ಬಂಗಾಳದ ಮುಂದಿನ ಸಿಎಂ” ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದರು. ಈ ಬೆನ್ನಲ್ಲೇ ಈ ಭೂಮಿಪುತ್ರ ಸೌರವ್‌ ಗಂಗೂಲಿಯೇ ಎನ್ನುವ ಚರ್ಚೆ ಚಾಲ್ತಿಯಲ್ಲಿತ್ತು.

ಇತ್ತೀಚೆಗೆ ಸೌರವ್‌ ಗಂಗೂಲಿ ಪಶ್ಚಿಮ ಬಂಗಾಳದ ರಾಜ್ಯ ಬಿಜೆಪಿ ನಾಯಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿಯೇ ಕಳೆದ ಕೆಲವು ದಿನಗಳಿಂದ ಗಂಗೂಲಿ ಬಿಜೆಪಿಗೆ ಸೇರುವ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿದ್ದವು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹೀಗಿರುವಾಗಲೇ ರಾಜ್ಯಪಾಲ ಜಗದೀಪ್ ಧಂಕರ್ ಜತೆ ಗಂಗೂಲಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ. ಅಮಿತ್‌ ಷಾ ಹೇಳಿಕೆ ನೀಡಿರುವುದು ಮತ್ತು ಇತ್ತೀಚೆಗಿನ ಸೌರವ್‌ ಗಂಗೂಲಿ ನಡವಳಿಕೆಗಳು ಕಂಡವರು ಯಾರು ಬೇಕಾದವರೂ ಇವರೇ ಬಂಗಾಳದ ಮುಂದಿನ ಸಿಎಂ ಎಂದು ಹೇಳಬಹುದು. ಗಂಗೂಲಿ ಇದುವರೆಗೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ ರಾಜಪಾಲರ ಭೇಟಿ ಮಾತ್ರ ಪಶ್ಚಿಮ ಬಂಗಾಳದ ರಾಜಕೀಯದ್ದೇ ಎನ್ನಬಹುದು.

ಕೇಂದ್ರ ಬಿಜೆಪಿ ನಾಯಕರ ಮೂಲಗಳ ಪ್ರಕಾರ ಸೌರವ್‌ ಗಂಗೂಲಿ ಸದ್ಯದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಜ.12ರಂದು ಸ್ವಾಮಿ ವಿವೆಕಾನಂದರ ಜಯಂತಿಯ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಆಗ ಪಶ್ಚಿಮ ಬಂಗಾಳದಲ್ಲಿ ಹಲವರು ಬಿಜೆಪಿ ಸೇರಲಿದ್ದಾರೆ. ಇದರಲ್ಲಿ ಸೌರವ್‌ ಗಂಗೂಲಿ ಪ್ರಮುಖರು ಎನ್ನಲಾಗುತ್ತಿದೆ. ಮುಂದಿನ ವರ್ಷ ಏಪ್ರಿಲ್-ಮೇ ನಲ್ಲಿ ಪಶ್ಚಿಮ ಬಂಗಾಳದ ಚುನಾವಣೆ ನಡೆಯಲಿದೆ. ಸೌರವ್ ಗಂಗೂಲಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಬಂಗಾಳದಲ್ಲಿ ಬಿಜೆಪಿಗೆ ಬಹುಮತ ಬಂದರೆ ಗಂಗೂಲಿಯೇ ಸಿಎಂ ಎಂದು ಹೇಳಲಾಗುತ್ತಿದೆ.

ಗಂಗೂಲಿ ಆರಂಭದಿಂದಲೂ ಬಿಜೆಪಿ ಜತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಬಿಸಿಸಿಐ ಅಧ್ಯಕ್ಷ ಪಟ್ಟಕ್ಕೇರುವ ಮುನ್ನ ಗಂಗೂಲಿ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಆಪ್ತರು. ಬಿಜೆಪಿ ಅಧಿಕಾರದಲ್ಲಿರುವ ಕಾರಣದಿಂದಲೇ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಲು ಸಾಧ್ಯವಾಯ್ತು. ಆದರೀಗ, ಅಮಿತ್‌ ಷಾ ಮನವಿ ಮೇರೆಗೆ ಗಂಗೂಲಿ ಬಿಜೆಪಿ ಸೇರಿದರೆ ಮುಂದಿನ ಚುನಾವಣೆಯಲ್ಲಿ ‘ದೀದಿ ವರ್ಸಸ್ ದಾದಾ’ ಎನ್ನುವುದು ಮಾತ್ರ ಖಚಿತ.

Tags: west bengal election mamata banerjee v/s sourav ganguly
Previous Post

ರೈತರ ಕರೆಗೆ ಓಗೊಟ್ಟ ದೇಶದ ಜನತೆ; ಜಿಯೋದಿಂದ ಪೋರ್ಟ್ ಆಗುತ್ತಿರುವ ಯುವಕರು

Next Post

“ಕೈ ಮುಗಿದು ಕೇಳುವೆ, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ” – ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್‌ ಮನವಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
"ಕೈ ಮುಗಿದು ಕೇಳುವೆ

"ಕೈ ಮುಗಿದು ಕೇಳುವೆ, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ" - ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್‌ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada