ರಾಜ್ಯದಾದ್ಯಂತ ಕರೋನಾ ಭೀತಿ ಹೆಚ್ಚುತ್ತಾ ಇದ್ದರೂ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ದಿನಾಂಕಗಳನ್ನು ಪ್ರಸ್ತಾಪಿಸಿದೆ. ಈ ಕುರಿತ ಸುತ್ತೋಲೆಯನ್ನು ಶಿಕ್ಷಣ ಇಲಾಖೆಯು ಈಗಾಗಲೇ ಹೊರಡಿಸಿದೆ.
ಸುತ್ತೋಲೆಯ ಪ್ರಕಾರ ಒಂದರಿಂದ ಮೂರನೇ ತರಗತಿಯವರೆಗೆ ಜುಲೈ 15ರಿಂದ ತರಗತಿಗಳ ಪ್ರಾರಂಭವಾಗಲಿವೆ, ನಾಲ್ಕರಿಂದ ಮೂರನೇ ತರಗತಿಗೆ ಜುಲೈ 1ರಿಂದ ತರಗತಿಗಳು ಪ್ರಾರಂಭವಾಗಲಿವೆ. ಇನ್ನು ಎಂಟರಿಂದ ಹತ್ತನೇ ತರಗತಿಯ ಮಕ್ಕಳಿಗೆ ಜುಲೈ 15ರಿಂದ ತರಗತಿಗಲು ಆರಂಭವಾಗಲಿವೆ. ಪೂರ್ವ-ಪ್ರಾಥಮಿಕ ತರಗತಿಗಳನ್ನು ಜುಲೈ 20ರಿಂದ ಆರಂಭಿಸಲು ಪ್ರಸ್ತಾಪಿಸಲಾಗಿದೆ.
ಇನ್ನು ಈ ಕುರಿತು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರ ಹಾಗೂ ಪೋಷಕರ ಸಭೆ ಮತ್ತು ಎಸ್.ಡಿ.ಎಂ.ಸಿ. ಸದಸ್ಯರ ಸಭೆಯನ್ನು ಕರೆದು ಅವರ ಅಭಿಪ್ರಾಯವನ್ನು ಪಡೆಯುವಂತೆ ತಿಳಿಸಲಾಗಿದೆ.
Also Read: ಜುಲೈನಲ್ಲಿ ಶಾಲೆಗಳ ಪುನರಾರಂಭಕ್ಕೆ ಪೋಷಕರ ವಿರೋಧ; ಶುರುವಾಗಿದೆ ಆನ್ಲೈನ್ ಅಭಿಯಾನ
ಕರೋನಾ ಸೋಂಕು ಭಾರತದಲ್ಲಿ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಈ ಸಂದರ್ಭದಲ್ಲಿ, ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರ ಸಂಘವೊಂದು ಆನ್ಲೈನ್ ಅಭಿಯಾನವನ್ನು ಹಮ್ಮಿಕೊಂಡಿತ್ತು. ಇದರ ನಡುವೆಯೇ ಸರ್ಕಾರ ಈ ಸುತ್ತೋಲೆಯನ್ನು ಹೊರಡಿಸಿದ್ದು ಮುಂದೆ ಯಾವ ರೀತಿ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುತ್ತದೆ ಎಂದು ನೋಡಬೇಕಿದೆ.