ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 10 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 4267 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,82,354 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 99,126 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 79,908 ಸಕ್ರಿಯ ಕರೋನಾ ಪ್ರಕರಣಗಳಿವೆ. ಇದುವರೆಗೂ 3,312 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಹಾಗಾಗಿ ಒಟ್ಟು ಪ್ರಕರಣಗಳ 1.81% ಕರೋನಾದಿಂದಾಗಿ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1,243 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 75,428 ತಲುಪಿದೆ. ಒಟ್ಟು 41,166 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,276 ಮಂದಿ ಮರಣಹೊಂದಿದ್ದಾರೆ.
