ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 6 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 6805 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,58,254 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 80,281 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 75,068 ಸಕ್ರಿಯ ಕರೋನಾ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2544 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 67,425 ತಲುಪಿದೆ. ಒಟ್ಟು 33,932ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,178 ಮಂದಿ ಮರಣಹೊಂದಿದ್ದಾರೆ.






