ಸರಕಾರವು ಅನಧಿಕೃತ ಬಡಾವಣೆ ಹಾಗೂ ಕಟ್ಟಡಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಮೊದಲಾದ ಮೂಲ ಸೌಕರ್ಯ ಒದಗಿಸಿದೆ. ಆದರೂ ಯಾವುದೇ ತೆರಿಗೆ ರಾಜ್ಯದ ಬೊಕ್ಕಸಕ್ಕೆ ಬರುತ್ತಿಲ್ಲ.ರಾಜ್ಯದ ಆದಾಯ ಹೆಚ್ಚಿಸಲು ಇಂತಹ ಅಕ್ರಮ ಬಡಾವಣೆ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸಲು ಚಿಂತನೆ ನಡೆಸಿದ್ದು , ಒಂದು ವಾರದೊಳಗೆ ಅನಧಿಕೃತ ಆಸ್ತಿಗಳನ್ನು ಸಕ್ರಮಗೊಳಿಸುವ ಹೊಸ ಮಾರ್ಗಸೂಚಿಗಳನ್ನು ನಗರಾಭಿವೃದ್ಧಿ ಇಲಾಖೆ ಕೊಡಲಿದೆ ಎಂದು ಹೇಳಿದ್ದಾರೆ.
ಹಳೆಯ ಸಮೀಕ್ಷೆಯ ಪ್ರಕಾರ ಬೆಂಗಳೂರು ನಗರವೊಂದರಲ್ಲೇ 2.93ಲಕ್ಷ ಅನಧಿಕೃತ ಕಟ್ಟಡಗಳಿವೆ, ಇಡೀ ರಾಜ್ಯದಲ್ಲಿ ಇದರ ಸಂಖ್ಯೆ 35 ಲಕ್ಷ ಇದೆ.ಹಳೆಯ ಸಮೀಕ್ಷೆ ಆಗಿರುವುದರಿಂದ ಇದರ ಸಂಖ್ಯೆ ಈಗ ದ್ವಿಗುಣಗೊಂಡಿರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಂದಾಜಿಸಿದರು.
ಇದುವರೆಗೂ 17,168 ಕರೋನಾ ಪರೀಕ್ಷೆಗಳನ್ನು ನಾವು ನಡೆಸಿದ್ದು, ದೇಶದಲ್ಲೇ ಕರ್ನಾಟಕವು ಕರೋನಾ ಪರೀಕ್ಷೆ ರೇಟಿಂಗ್ ನಲ್ಲಿ ಎರಡನೆ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿರುವ ಕೇರಳದಲ್ಲಿ ಸೋಂಕು ಪರೀಕ್ಷಿಸಿದ 44.16 ಪ್ರಕರಣಗಳಲ್ಲಿ ಒಂದು ಪಾಸಿಟಿವ್ ಕಂಡು ಬರುತ್ತಿದೆ, ಕರ್ನಾಟಕದಲ್ಲಿ 43.56 ಪ್ರಕರಣಗಳಲ್ಲಿ ಒಂದು ಪಾಸಿಟಿವ್ ಕಂಡುಬರುತ್ತಿದ್ದು ರಾಜ್ಯವು ಎರಡನೆ ಸ್ಥಾನದಲ್ಲಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಪ್ರತಿ ಜಿಲ್ಲೆಯಲ್ಲಿ ಎರಡು ಪರೀಕ್ಷಾ ಕೇಂದ್ರ ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪ್ರರೀಕ್ಷಾ ಕೇಂದ್ರ ಇರುವಂತೆ ICMR ಆದೇಶಿಸಿದೆ.ಈ ನಿಟ್ಟಿನಲ್ಲಿ ಎಪ್ರಿಲ್ ಅಂತ್ಯದೊಳಗೆ ಇನ್ನೂ ಹತ್ತು ಪ್ರಯೋಗಾಲಯಗಳನ್ನು ರಾಜ್ಯದ ವಿವಿಧೆಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಲಾಕ್‌ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಅದನ್ನು ಎದುರಿಸುವ ಬಗೆಗೆ ಚಿಂತನೆ ನಡೆಸಿದ್ದೇವೆ. ಜನರು ಆರಂಭಿಕ ರೋಗ ಲಕ್ಷಣ ಕಾಣಿಸಿಕೊಂಡ ಸರಾಸರಿ ನಾಲ್ಕು ದಿನಗಳ ನಂತರ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು,”ಆರೋಗ್ಯ ಸೇತು” APPನ್ನು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಇದೇ ಸಂಧರ್ಭದಲ್ಲಿ ಮನವಿ ಮಾಡಿದರು.
ಇಂದು ಬೆಳಿಗ್ಗೆ DCM ಡಾ. ಅಶ್ವತ್ಥ ನಾರಾಯಣ ಏಪ್ರಿಲ್ 20ರ ನಂತರ ಕಂಪನಿಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗುವುದು. ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ತೆರಳಿ ಕೆಲಸ ಮಾಡಲು ಅನುಮತಿ ನೀಡಲಾಗುವುದು ಮತ್ತು ಈ ಸಂಬಂಧ ಉದ್ಯೋಗಿಗಳಿಗೆ ಯಾವುದೇ ಪಾಸ್ ಅಗತ್ಯ ಇಲ್ಲ ಎಂದು ಹೇಳಿದ್ದರು.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ವಿಶೇಷವಾಗಿ ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಬೇಕೆಂಬ ಅಪೇಕ್ಷೆಯಿದೆ. ಪ್ರಸ್ತುತ ನಡೆಯುತ್ತಿರುವ ಬೆಳವಣಿಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ
ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ಕಂಪನಿಗಳಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹಾಗೂ ಕಾರ್ಖಾನೆಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಏಪ್ರಿಲ್ 20ರ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.