ಕರ್ನಾಟಕದಲ್ಲಿ ಹೊಸಾದಾಗಿ 213 ಕರೋನಾ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಪತ್ತೆಯಾದ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 7,213 ತಲುಪಿದೆ. ರಾಜ್ಯದಲ್ಲಿ ಇಂದು 180 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು 4135 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯದಲ್ಲಿ ಸದ್ಯ 2,987 ಸಕ್ರಿಯ ಕರೋನಾ ಪ್ರಕರಣಗಳಿವೆ. ಇಂದೆರಡು ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿ ಇದುವರೆಗೂ ಒಟ್ಟು 88 ಮಂದಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿದ್ದಾರೆ. ಇಂದು ಕಂಡು ಬಂದ ಪ್ರಕರಣಗಳಲ್ಲಿ 103 ಮಂದಿ ಅಂತರಾಜ್ಯ ಪ್ರಯಾಣಿಕರಾಗಿದ್ದು, 23 ಮಂದಿ ಹೊರದೇಶದಿಂದ ಬಂದವರೆಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.
ಇಡೀ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 11,929 ಹೊಸ ಕರೋನಾ ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ 32 ಸಾವಿರ ದಾಟಿದೆ. ಇದುವರೆಗೂ 1 ಲಕ್ಷದ 70 ಸಾವಿರ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಾದ್ಯಂತ 311 ಮಂದಿ ಇಂದು ಸೋಂಕಿಗೆ ಬಲಿಯಾಗಿದ್ದಾರೆ. ಕರೋನಾ ಭಾರತದಲ್ಲಿ ಬಲಿ ಪಡೆದುಕೊಂಡವರ ಸಂಖ್ಯೆ 9,520 ತಲುಪಿದೆ.