ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಸೋಮವಾರ ಎತ್ತಿನಗಾಡಿಗಳ ಸದ್ದು ಜೋರಾಗಿ ಕೇಳಿಸುತಿತ್ತು. ಇಂಧನ ಬೆಲೆ ಏರಿಕೆಯ ವಿರುದ್ದ ನವದೆಹಲಿಯಲ್ಲಿ ಕಂಡು ಬಂದ ದೃಶ್ಯಗಳಿವು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ವ್ಯಾಪಕವಾಗಿ ಕುಸಿದಿದ್ದರೂ ಕಳೆದ 23 ದಿನದಿಂದ ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸುವ ದೃಷ್ಟಿಯಿಂದ ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರ ರಾಜಧಾನಿ ದೆಹಲಿ ರಸ್ತೆಗಳಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಿದರು.
“ಅಂತರರಾಷ್ಟ್ರೀಯ ಮಟ್ಟದಲ್ಲಿ ಈಗ ಕಚ್ಚಾತೈಲ ಬೆಲೆ ಒಂದು ಬ್ಯಾರಲ್ ಗೆ 130 ಡಾಲರ್ ಇದೆ. ಆದರೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸುತ್ತಿದೆ,” ಎಂದು ಆಲ್ ಇಂಡಿಯಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಿದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿದಿನವೂ ಪೆಟ್ರೋಲ್ – ಡೀಸೆಲ್ ಬೆಲೆ ಹೆಚ್ಚಿಸುವ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ಮೋದಿ ಸರಕಾರದ ಈ ನೀತಿ ನಾಚಿಕೆಗೇಡಿನದಿಂದ ಕೂಡಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.