• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತರ ಮೇಲೆ ಬಲಪ್ರಯೋಗಿಸುವುದು ಸರಿಯಲ್ಲ; RSS ಅಂಗಸಂಸ್ಥೆ

by
November 27, 2020
in ದೇಶ
0
ರೈತರ ಮೇಲೆ ಬಲಪ್ರಯೋಗಿಸುವುದು ಸರಿಯಲ್ಲ; RSS ಅಂಗಸಂಸ್ಥೆ
Share on WhatsAppShare on FacebookShare on Telegram

ಪಂಜಾಬ್ ಮತ್ತು ಹರಿಯಾಣದ ಪ್ರತಿಭಟನಾಕಾರ ರೈತರ ಮೇಲೆ ಬಲ ಪ್ರಯೋಗಿಸಿರುವುದನ್ನು ಆರ್‌ಎಸ್‌ಎಸ್ ಅಂಗಸಂಸ್ಥೆ ಭಾರತೀಯ ಕಿಸಾನ್ ಸಂಘ (BKS) ಟೀಕಿಸಿದೆ.

ADVERTISEMENT

ಕೇಂದ್ರದ ಮೂರು ಕೃಷಿ ಮಸೂದೆಗಳ ವಿರುದ್ಧ ರೈತರ ಪ್ರತಿಭಟನೆಯ “ರಾಜಕೀಯೀಕರಣ” ದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಕೆಎಸ್, ಆಂದೋಲನವನ್ನು ಶಾಂತಿಯುತವಾಗಿ ಪರಿಹರಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವನ್ನು ಒತ್ತಾಯಿಸಿದೆ. ಮತ್ತು ಮುಕ್ತ ಮಾರುಕಟ್ಟೆಯಲ್ಲೂ MSP (ಕನಿಷ್ಠ ಬೆಂಬಲ ಬೆಲೆ) ಖಾತರಿಪಡಿಸುವಂತೆ ಆಗ್ರಹಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಪ್ರತಿಭಟನೆ ರಾಜಕೀಯದಾಟವಾಗಿ ಮಾರ್ಪಟ್ಟಿದೆ ಮತ್ತು ರೈತರು ಮಧ್ಯದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ರೈತರು ಎದುರಿಸುತ್ತಿರುವ ದೌರ್ಜನ್ಯಗಳನ್ನು ತಪ್ಪಿಸಬೇಕಾಗಿತ್ತು ಮತ್ತು ಸರ್ಕಾರವು ರೈತರನ್ನು ಪ್ರಚೋದಿಸುವ ಮತ್ತು ದಾರಿತಪ್ಪಿಸುವವರ ಬೆನ್ನು ಬೀಳಬೇಕು. ಅದೇ ಸಮಯದಲ್ಲಿ, ಮಂಡಿ ಜೊತೆಗೆ ಮುಕ್ತ ಮಾರುಕಟ್ಟೆಯಲ್ಲಿನ ರೈತರಿಗೂ MSP ಅನ್ವಯವಾಗುವಂತೆ ಸರ್ಕಾರ ಖಚಿತಪಡಿಸಿಕೊಳ್ಳಬೇಕು ”ಎಂದು BKS ಸಂಘಟನಾ ಕಾರ್ಯದರ್ಶಿ ದಿನೇಶ್ ಕುಲಕರ್ಣಿ ಹೇಳಿದ್ದಾರೆ.

MSP ಯಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ, ಆದರೆ ಇದು ಕೇವಲ 8-10ರಷ್ಟು ಮಾತ್ರ ಎಂದು ಕುಲಕರ್ಣಿ ತಿಳಿಸಿದ್ದಾರೆ.

Also Read: ದೆಹಲಿ ಚಲೋ; ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು

“ತಮ್ಮ ಉತ್ಪನ್ನಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲು ರೈತರನ್ನು ಇನ್ನೂ ಒತ್ತಾಯಿಸಲಾಗುತ್ತಿದೆ. ಆದ್ದರಿಂದ MSP ಯನ್ನು ಮುಕ್ತ ಮಾರುಕಟ್ಟೆಯೊಂದಿಗೆ ಸಂಯೋಜಿಸಬೇಕು ಎಂದು ನಾವು ಸರ್ಕಾರವನ್ನು ಕೇಳಿದ್ದೇವೆ. ಒಬ್ಬ ರೈತನು ತನ್ನ ಉತ್ಪನ್ನಗಳನ್ನು ಎಲ್ಲಿ ಮಾರುತ್ತಾನೆ ಎಂಬುದರ ಹೊರತಾಗಿಯೂ, ಅವನಿಗೆ ಕನಿಷ್ಠ ಬೆಂಬಲ ಬೆಲೆಯ ಭರವಸೆ ನೀಡಬೇಕು. ಅದರಿಂದ ಕಡಿಮೆಗೆ ಖರೀದಿಸಲು ಯಾರಿಗೂ ಅವಕಾಶ ನೀಡಬಾರದು,” ಎಂದು ಅವರು ದಿ ಪ್ರಿಂಟ್‌ ಗೆ ಹೇಳಿದ್ದಾರೆ.

ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಈಗ ಡಿಸೆಂಬರ್ 3 ರಂದು ಎಲ್ಲಾ ಕಾರ್ಮಿಕ ಸಂಘಗಳು ಮತ್ತು ಪ್ರತಿಭಟನಾ ರೈತ ಗುಂಪುಗಳೊಂದಿಗೆ ಸಭೆ ಕರೆದಿದೆ.

“ನಾವು ಪ್ರತಿಭಟನಾ ನಿರತ ರೈತರೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಡಿಸೆಂಬರ್ 3 ರಂದು ಸಭೆ ಕರೆಯಲಾಗಿದೆ ಎಂದು ಅವರಿಗೆ ತಿಳಿಸಿದ್ದೇವೆ. ನಾವು ಅಲ್ಲಿ ಕೃಷಿ ಸಂಬಂಧಿತ ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಬೇಕು ” ಎಂದು ಕುಲಕರ್ಣಿ ಹೇಳಿದ್ದಾರೆ.

ಈ ಮೂರು ಮಸೂದೆಗಳ ವಿರುದ್ಧ ಹಲವಾರು ರೈತ ಸಂಘಟನೆಗಳು, ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣದಲ್ಲಿ ಪ್ರತಿಭಟನೆ ನಡೆಸುತ್ತಿದೆ. ರೈತರಿಗೆ ಉತ್ತಮ ಬೆಲೆ ನೀಡುವಂತೆ ಎಂಎಸ್‌ಪಿಯನ್ನು ಕಾನೂನುಬದ್ಧವಾಗಿ ರೂಪಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಒಂದು.

ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ʼದೆಹಲಿ ಚಲೋʼ ರ್ಯಾಲಿ ಸಾಗಿದ ರೈತರ ಮೇಲೆ ಆಶ್ರುವಾಯು ಸಿಡಿಸಿ, ಜಲಫಿರಂಗಿ ಬಳಸಿರುವುದು ವ್ಯಾಪಕ ಖಂಡನೆಗೆ ಒಳಗಾಗಿದೆ.

Tags: Farmer protestRSSRSS affiliate
Previous Post

ತ್ಯಾಗ ಮಾಡಿ ಬಂದಿರುವ ನಮ್ಮನ್ನು ಮಂತ್ರಿ ಮಾಡಬೇಕು; MTB ನಾಗರಾಜ್ ಆಗ್ರಹ

Next Post

ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕುರುಬ ಮುಖಂಡರಿಂದ ಬೇಡಿಕೆ

Related Posts

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

by ಪ್ರತಿಧ್ವನಿ
August 27, 2026
0

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ...

Read moreDetails
ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

August 27, 2026
2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

2047-ವಿಕಸಿತ ಭಾರತಕ್ಕೊಂದು ಜನ ಪ್ರಣಾಳಿಕೆ

August 27, 2026
RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

August 27, 2026
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

August 26, 2026
Next Post
ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕುರುಬ ಮುಖಂಡರಿಂದ ಬೇಡಿಕೆ

ಮೂವರು ಕುರುಬ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕುರುಬ ಮುಖಂಡರಿಂದ ಬೇಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada