• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಾಕ್‌ಡೌನ್: ಹಸಿವಿನಿಂದ ಕಂಗೆಟ್ಟಿರುವ ಬಡವರಿಗೆ ಯಾರು ದಿಕ್ಕು?

by
April 22, 2020
in ಕರ್ನಾಟಕ
0
ಲಾಕ್‌ಡೌನ್: ಹಸಿವಿನಿಂದ ಕಂಗೆಟ್ಟಿರುವ ಬಡವರಿಗೆ ಯಾರು ದಿಕ್ಕು?
Share on WhatsAppShare on FacebookShare on Telegram

ಕರೋನಾ ಸೋಂಕು ನಿವಾರಣೆಗಾಗಿ ಕಳೆದ ಮಾರ್ಚ್ 24 ರಿಂದಲೂ ದೇಶವನ್ನು ಲಾಕ್‌ಡೌನ್‌ ಮಾಡಿ ಕೇಂದ್ರ ಸರ್ಕಾರ ಆದೇಶ ಮಾಡಿದೆ. ಹೀಗಾಗಿ ಲಕ್ಷಾಂತರ ಕಾರ್ಮಿಕರು ಪರ ಸ್ಥಳಗಳಲ್ಲಿ ಸಿಲುಕಿಕೊಂಡು ಸ್ವಂತ ಸ್ಥಾನಗಳಿಗೆ ತೆರಳಲಾಗದೆ ಪರದಾಡುತ್ತಿದ್ದಾರೆ. ದಾನಿಗಳು ಕೊಟ್ಟರೆ ಉಂಟು ಇಲ್ಲದಿದ್ದರೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಎನ್ನುಂತಾಗಿದೆ ಬದುಕು. ಬಡವರ ಮಕ್ಕಳ ಅನ್ನ ಕಿತ್ತ ಕರೋನಾ ವೈರಸ್‌ ತನ್ನ ಅಟ್ಟಹಾಸ ಮುಂದುವರಿಸಿದೆ. ಈಗಾಗಲೇ ಮೇ 3 ರ ತನಕ ಲಾಕ್‌ಡೌನ್‌ ಘೋಷಣೆ ಮಾಡಿರುವ ಭಾರತ ಸರ್ಕಾರ, ಲಾಕ್‌ಡೌನ್‌ ಮುಂದುವರಿಸಬೇಕೇ? ಬೇಡವೇ? ಎನ್ನುವ ಬಗ್ಗೆ ಇನ್ನೂ ಕೂಡ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಒಂದು ವೇಳೆ ಕರೋನಾ ಹೆಮ್ಮಾರಿ ನಿಯಂತ್ರಣಕ್ಕೆ ಸಿಗದಿದ್ದರೆ ಮತ್ತೊಂದಿಷ್ಟು ದಿನಗಳ ಕಾಲ ದೇಶವನ್ನು ಲಾಕ್‌ಡೌನ್‌ ಮಾಡುವ ಅನಿವಾರ್ಯತೆ ಎದುರಾದರೂ ಅಚ್ಚರಿಯಿಲ್ಲ.

ADVERTISEMENT

ಬೆಂಗಳೂರಿನ 8ನೇ ಮೈಲಿ ಬಳಿ ಅನ್ನ ಆಹಾರ ಸಿಗದೆ ವೃದ್ಧ ಭಿಕ್ಷುಕಿ ಒಬ್ಬರು ಸಾವನ್ನಪ್ಪಿದ ಘಟನೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ವೃದ್ದ ಮಹಿಳೆ, ಲಾಕ್‌ಡೌನ್‌ನಿಂದ ಭಿಕ್ಷೆ ಸಿಗದೆ ಸಾವನ್ನಪ್ಪಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಕಟ್ಟಡದ 2ನೇ ಮಹಡಿಯಲ್ಲಿ ಮಲಗಿದ್ದ ವೃದ್ದೆಗೆ ಯಾರೂ ಕೂಡ ಆಹಾರ ಕೊಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ವೃದ್ಧ ಮಹಿಳೆ ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದರು. ವೃದ್ಧ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೇ ರೀತಿ ಹಲವಾರು ಕಡೆಗಳಲ್ಲಿ ವೃದ್ಧರು, ಅಶಕ್ತರು, ಭಿಕ್ಷೆ ಬೇಡಿಯೇ ಜೀವನ ನಡೆಸುತ್ತಿದ್ದ ಸಾವಿರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅಂತಿಮವಾಗಿ ಊಟೋಪಚಾರ ಸಿಗದೆ ನಿತ್ರಾಣರಾಗಿ ಸಾವಿಗೆ ಬಲಿಯಾಗುವ ಎಲ್ಲಾ ಸಾಧ್ಯತೆಗಳೂ ಇವೆ ಎನ್ನಲಾಗುತ್ತಾ ಇದೆ. ಸಾಕಷ್ಟು NGOಗಳು ಬಡವರಿಗೆ ಆಹಾರ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಆಹಾರ ಸೇವಿಸಿ ಯಾವುದಾದರು ಕಟ್ಟಡದ ಮೇಲೆ ಮಲಗಿದ್ದರೆ ಆಹಾರವೂ ಸಿಗದೆ ನಿಶಕ್ತರಾಗಿ, ಆಹಾರ ಪಡೆದುಕೊಳ್ಳಲೂ ಸಾಧ್ಯವಾಗದಿದ್ದರೆ ಅಂಥಹವರ ಪರಸ್ಥಿತಿ ಚಿಂತಾಜನಕವಾಗುವ ಸಂದರ್ಭ ಎದುರಾಗಿದೆ.

ಬೆಂಗಳೂರು ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಿಕ್ಷೆ ಬೇಡುತ್ತಾ, ಲೈಂಗಿಕ ಅಲ್ಪ ಸಂಖ್ಯಾತರಾಗಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಮಂಗಳಮುಖಿಯರು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ದಾನಿಗಳು ನೀಡುವ ಊಟಕ್ಕಾಗಿ ಎದುರು ನೋಡುವಂತಾಗಿದೆ. ಬಡ ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ಯಾರಾದರೂ ಅನ್ನ ನೀಡಲು ಬರಬಹುದು ಎನ್ನುವ ಆಸೆಗಣ್ಣಿನಿಂದ ಕಾಯುವ ಪರಿಸ್ಥಿತಿ ಎದುರಾಗಿದೆ. ಕಟ್ಟಡ ಕಾರ್ಮಿಕರು ಒಂದೊತ್ತು ಊಟವಿಲ್ಲದೆ ಬದುಕುತ್ತಿದ್ದಾರೆ. ಆದರೆ ಅವರ ಜೊತೆಗಿರುವ ಸಣ್ಣ ಪುಟ್ಟ ಮಕ್ಕಳು ಹಸಿವಿನಿಂದ ಬಳಲುತ್ತಿವೆ. ಮೊದಲೇ ಪೌಷ್ಠಿಕಾಂಶ ಇಲ್ಲದ ಆಹಾರ ಸೇವಿಸುವ ಈ ಮಕ್ಕಳ ಈಗಿನ ಪರಿಸ್ಥಿತಿಯಂತೂ ಚಿಂತಾಜನಕವಾಗಿದೆ.

ಕಾರ್ಮಿಕ ಗರ್ಭಿಣಿಯರು ಪೌಷ್ಠಿಕಾಂಶ ಆಹಾರ ತಿನ್ನಬೇಕು ಎಂದು ಸರ್ಕಾರವೇ ಒದಗಿಸುತ್ತದೆ. ಆದರೆ ಲಾಕ್‌ಡೌನ್‌ನಿಂದಾಗಿ ಸಾಮಾನ್ಯರು ಆಹಾರ ಪಡೆಯುವುದೇ ಹರಸಾಹಸವಾಗಿದೆ. ದುಡಿದು ತಿನ್ನುವ ಮನಸ್ಸಿದ್ದರೂ ಕೆಲಸವಿಲ್ಲದೆ ಕೂಳು ಪಡೆಯಲು ಸಾಧ್ಯವಾಗುತ್ತಿಲ್ಲ, ಹೆರಿಗೆ ಸಮಯದಲ್ಲಿ ತಾಯಿಗೆ ಸಂಕಷ್ಟ ಉಂಟಾಗುವ ಸಾಧ್ಯತೆಯಿದೆ. ಅಥವಾ ಗರ್ಭದಲ್ಲಿರುವ ಮಗು ಹುಟ್ಟಿದ ಬಳಿಕ ಸಾಕಷ್ಟು ಸಮಸ್ಯೆಗೆ ಸಿಲುಕು ಸಾಧ್ಯತೆ ಹೆಚ್ಚಾಗಿದೆ. ಬಡ ಕೂಲಿ ಕಾರ್ಮಿಕರು ಸೇರಿ ಅನ್ನಕ್ಕಾಗಿ ಪರದಾಡುವ ಜನರಿಗೆ ಧವಸ ಧಾನ್ಯ ವಿತರಣೆಗೆ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಕೇಳುತ್ತಿದ್ದಾರೆ ಎನ್ನುವ ಮಾತುಗಳು ಕೂಡಾ ಹಲವೆಡೆ ಕೇಳಿಬಂದಿವೆ.

ನೂರಾರು ಕಾರ್ಮಿಕ ಕುಟುಂಬಗಳು ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತವಾಗಿದ್ದವು. ಗುತ್ತಿಗೆದಾರನನ್ನೇ ನಂಬಿಕೊಂಡಿದ್ದ ಈ ಕುಟುಂಬಗಳು ಅನಾಥವಾಗಿದೆ. ಗುತ್ತಿಗೆದಾರನೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಇನ್ನೂ ಬಿಲ್ಡರ್‌ಗಳನ್ನು ಸಂಪರ್ಕ ಮಾಡಲು ಸಾಧ್ಯವಾಗದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್ ಒಳಗೆ ಇರುವ ಸಾವಿರಾರು ಕುಟುಂಬಗಳು ಶೆಡ್‌ಗಳಲ್ಲಿ ವಾಸ ಮಾಡುತ್ತಿವೆ. ಅನ್ನಕ್ಕಾಗಿ ಪರಿತಪಿಸುತ್ತಿವೆ. ಇವರಿಗೆ ಊಟ ಒದಗಿಸುವ ಕೆಲಸ ಆಗಬೇಕು.

ಸರ್ಕಾರದಿಂದ ಯೋಜನೆಗಳು ಘೋಷಣೆ ಆಗುತ್ತವೆ. ಆದರೆ ಆ ಯೋಜನೆಗಳನ್ನು ಜನರಿಗೆ ತಲುಪಿಸಬೇಕಾದ ಕರ್ತವ್ಯ ಕ್ಷೇತ್ರದ ಶಾಸಕ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಸರ್ಕಾರ ಒಂದು ಕ್ಷೇತ್ರಕ್ಕೆ 25 ಲಕ್ಷ ಹಣವನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ. ದಿನಕ್ಕೆ ಒಂದು ಲಕ್ಷದಂತೆ ವೆಚ್ಚ ಮಾಡಿದರೂ ಇಡೀ ಕ್ಷೇತ್ರದಲ್ಲಿ ಅನ್ನವಿಲ್ಲದೆ ಇರುವ ಜನರ ಜವಾಬ್ದಾರಿ ತೆಗೆದುಕೊಳ್ಳಬಹುದು. ಆದರೆ 25 ಲಕ್ಷದಲ್ಲಿ ತಮಗಾಗಿ ಎಷ್ಟು ಉಳಿಸಬಹುದು ಎನ್ನುವ ಮನಸ್ಥಿತಿ ರಾಜಕೀಯ ನಾಯಕರಿಗೆ ಇಲ್ಲದಿದ್ದರೆ ಜನರು ಹಸಿವಿನಿಂದ ಸಾಯುವುದು ತಪ್ಪಲಿದೆ. ಒಂದು ವೇಳೆ ಇಲ್ಲೂ ರಾಜಕಾರಣಿಗಳು ತಮ್ಮ ಹಳೇ ಚಾಳಿ ಮುಂದುವರೆಸಿದ್ದೇ ಆದರೆ ಕೋವಿಡ್ – 19ನಿಂದ ಜನರ ಸಾಯುವುದಕ್ಕಿಂತ ಹಸಿವಿನಿಂದ ಸಾವನ್ನಪ್ಪುವ ದಿನಗಳು ಎದುರಾಗುವ ಸಾಧ್ಯತೆ ಹೆಚ್ಚಿದೆ.

Tags: Hungerindia lockdownಕಾರ್ಮಿಕಲಾಕ್‌ಡೌನ್‌
Previous Post

ಪಾದರಾಯನಪುರ: ಗಲಭೆಕೋರರಿಗೆ ಶಿಕ್ಷೆಯೇನೋ ಸರಿ, ಆದರೆ…

Next Post

ರಿಲಯನ್ಸ್ ಜಿಯೋ ಪಾಲು ಪಡೆದ ಫೇಸ್‌ಬುಕ್‌; ಗ್ರಾಹಕರಾದ ನಿಮಗಾಗುವ ಲಾಭ- ನಷ್ಟ ಎಷ್ಟು?

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post
ರಿಲಯನ್ಸ್ ಜಿಯೋ ಪಾಲು ಪಡೆದ ಫೇಸ್‌ಬುಕ್‌; ಗ್ರಾಹಕರಾದ ನಿಮಗಾಗುವ ಲಾಭ- ನಷ್ಟ ಎಷ್ಟು?

ರಿಲಯನ್ಸ್ ಜಿಯೋ ಪಾಲು ಪಡೆದ ಫೇಸ್‌ಬುಕ್‌; ಗ್ರಾಹಕರಾದ ನಿಮಗಾಗುವ ಲಾಭ- ನಷ್ಟ ಎಷ್ಟು?

Please login to join discussion

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!