ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುದೀರ್ಘ ಪತ್ರ ಬರೆದು, ಲಿಂಗಾಯತ ಅಭಿವೃದ್ಧಿ ನಿಗಮದ ಜೊತೆಗೆ, ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ಕಲ್ಪಿಸಿಕೊಂಡುವಂತೆ ಮನವಿ ಮಾಡಿದ್ದರು. ಇದಾದ ಒಂದೇ ದಿನದಲ್ಲಿ ನಿಗಮ ಸ್ಥಾಪನೆಗೆ ಆದೇಶ ನೀಡಲಾಗಿದೆ.
Also Read: ಲಿಂಗಾಯಿತರಿಗೆ 16% ಮೀಸಲಾತಿ ನೀಡುವಂತೆ MB ಪಾಟೀಲ್ ಮನವಿ
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ಬೆನ್ನಲ್ಲೇ ವೀರಶೈವ ಸಮುದಾಯದ ಮುಖಂಡರು, ಲಿಂಗಾಯುತ ಸಮುದಾಯದ ಮುಖಂಡರು, ಸ್ವಾಮೀಜಿಗಳು ಲಿಂಗಾಯತ, ವೀರಶೈವ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಆದೇಶಿಸಿದ್ದಾರೆ.

ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಯ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪನೆ ಮಾಡಿದ್ದರು. ಬಸವಕಲ್ಯಾಣದಲ್ಲಿ ಲಿಂಗಾಯತರ ಪ್ರಭಾವ ಹೆಚ್ಚಿರುವ ಹಿನ್ನೆಲೆಯಲ್ಲಿ ಲಿಂಗಾಯತ ಅಭಿವೃದ್ಧಿ ನಿಗಮದ ಸ್ಥಾಪನೆಯ ಹಿಂದೆಯೂ ಚುನಾವಣಾ ರಾಜಕಾರಣದ ನೆರಳಿದೆ ಎನ್ನಲಾಗುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ