ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200 ಕೋಟಿ ಅನುದಾನ ಒದಗಿಸಿದರೆ, ಪ್ರಯೋಜನವಾಗುವುದಿಲ್ಲ ಎಂದು ಶಾಸಕ ಎಂ ಬಿ ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಕೋರಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಅವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ, ಆದ್ದರಿಂದ ನೆರೆಯ ಮಹಾರಾಷ್ಟ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16=18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಎಂ ಬಿ ಪಾಟೀಲ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100-200ಕೋಟಿ ಅನುದಾನ ಒದಗಿಸಿದರೆ, ಪ್ರಯೋಜನವಾಗುವುದಿಲ್ಲ. ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ನ್ಯಾಯ ಒದಗಿಸಲು ಕೋರುತ್ತೇನೆ. @BSYBJP @CMofKarnataka@INCKarnataka pic.twitter.com/CeFPuvol2U
— M B Patil (@MBPatil) November 16, 2020
ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100–200ಕೋಟಿ ಅನುದಾನ ಒದಗಿಸಿದರೆ, ಹೆಚ್ಚು ಪ್ರಯೋಜನವಾಗುವದಿಲ್ಲ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಅವರು ವಿನಂತಿಸಿದ್ದಾರೆ.






